2026 ಹೊಸ ವರ್ಷ ಸಂಭ್ರಮಾಚರಣೆ: ಬೆಂಗಳೂರಿನ ಕೋರಮಂಗಲದಲ್ಲಿ ಜಿಬಿಎ - ಪೊಲೀಸ್ ವಿಶೇಷ ಸಿದ್ಧತೆ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೊಸ ವರ್ಷ ಸಂಭ್ರಮಾಚರಣೆ ಜೋರಾಗಿದೆ. ಹೊಸ ವರ್ಷ ಸಂಭ್ರಮಾಚರಣೆಗೆ ಕಳೆದ ಈಗಾಗಲೇ ಬೆಂಗಳೂರಿನ ಎಂ.ಜಿ ರಸ್ತೆ ಹಾಗೂ ಕೋರಮಂಗಲ ಸೇರಿದಂತೆ ವಿವಿಧ ಪ್ರಮುಖ ಪ್ರದೇಶಗಳಲ್ಲಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೀಗ ಬೆಂಗಳೂರು ಪೊಲೀಸರೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವೂ ಸಹ ಕೈಜೋಡಿಸಿದೆ.
ಹೊಸ ವರ್ಷದ ಸಿದ್ಧತೆ - ಕೋರಮಂಗಲದಲ್ಲಿ ಪಾಲಿಕೆ ಆಯುಕ್ತರು ಹಾಗೂ ಪೊಲೀಸ್ ಉಪ ಆಯುಕ್ತರಿಂದ ಜಂಟಿ ಪಾದಯಾತ್ರೆ ಮತ್ತು ಭದ್ರತಾ ಪರಿಶೀಲನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಲವು ಪ್ರಮುಖ ನಿರ್ಧಾರಗಳು ಹಾಗೂ ಸೂಚನೆಗಳನ್ನು ನೀಡಲಾಗಿದೆ.

ಹೊಸ ವರ್ಷದ ಹಿಂದಿನ ದಿನ ಡಿಸೆಂಬರ್ 31ರ ಬುಧವಾರ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್, ಅಭಿವೃದ್ಧಿ ವಿಭಾಗದ ಹೆಚ್ಚುವರಿ ಆಯುಕ್ತರಾದ ನವೀನ್ ಕುಮಾರ್ ರಾಜು ಮತ್ತು ಆಗ್ನೇಯ ವಿಭಾಗದ ಪೊಲೀಸ್ ಉಪ ಆಯುಕ್ತರಾದ ಸಾರಾ ಫಾತಿಮಾ ಅವರು ಡಿಸೆಂಬರ್ 30ರ ಮಂಗಳವಾರ ಕೋರಮಂಗಲದ ಪ್ರಮುಖ ರಸ್ತೆಗಳಲ್ಲಿ ಜಂಟಿ ಪಾದಯಾತ್ರೆ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಕೋರಮಂಗಲದ 5ನೇ ಬ್ಲಾಕ್ನ 1ನೇ ಕ್ರಾಸ್ (ಎಂಪೈರ್ ಹೋಟೆಲ್ ರಸ್ತೆ) ಹಾಗೂ ಸುತ್ತಮುತ್ತಲಿನ ಆಯಕಟ್ಟಿನ ಪ್ರದೇಶಗಳಲ್ಲಿ ಅಧಿಕಾರಿಗಳ ತಂಡವು ಭೇಟಿ ನೀಡಿ ಈ ಕೆಳಗಿನ ಅಂಶಗಳನ್ನು ಪರಿಶೀಲನೆ ನಡೆಸಿದೆ.
ಮಹಿಳಾ ಸುರಕ್ಷತೆ ಮತ್ತು ಐಲ್ಯಾಂಡ್ಸ್
ಬೆಂಗಳೂರಿನ ವಿವಿಧ ಭಾಗದಲ್ಲಿ ಮುಖ್ಯವಾಗಿ ಸಂಭ್ರಮಾಚರಣೆ ನಡೆಯುವ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ವಿಶೇಷವಾಗಿ ಸಿದ್ಧಪಡಿಸಲಾದ ಸೇಫ್ಟಿ ಐಲ್ಯಾಂಡ್ ಕೇಂದ್ರಗಳು ಮತ್ತು ಪೊಲೀಸ್ ಕಣ್ಗಾವಲು ಗೋಪುರಗಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರಲ್ಲಿ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರಿನಾದ್ಯಂತ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಸುರಕ್ಷತಾ ದ್ವೀಪ (ಸೇಫ್ಟಿ ಐಲ್ಯಾಂಡ್) ಪರಿಚಯಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಯಾವುದೇ ಅವಘಡ ಅಥವಾ ತುರ್ತು ಸಂದರ್ಭ ಏರ್ಪಟ್ಟರೂ ಈ ಯಂತ್ರದ ಬಳಿ ಬಂದು ಮಹಿಳೆಯರು ಕೆಂಪು ಬಟನ್ ಒತ್ತಿದರೆ ಸಾಕು ಪೊಲೀಸರು ಬರಲಿದ್ದಾರೆ.
ತಾಂತ್ರಿಕ ಕಣ್ಗಾವಲು
ಇಡೀ ಪ್ರದೇಶವನ್ನು ವ್ಯಾಪಿಸುವಂತೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಜಾಲ ಮತ್ತು ನಿಯಂತ್ರಣ ಕೊಠಡಿಯ ಸಂಪರ್ಕ ಕಲ್ಪಿಸಲಾಗಿದೆ. ಜನದಟ್ಟಣೆ ಅಧಿಕವಾಗುವ ಸ್ಥಳಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದಂತೆ ಬ್ಯಾರಿಕೇಡ್ಗಳ ಅಳವಡಿಕೆ ಮತ್ತು ಪಾದಚಾರಿ ಮಾರ್ಗಗಳ ಸ್ವಚ್ಛತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಲೂ ಸಹಕಾರ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಸ್ತೆಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬೀದಿ ದೀಪಗಳು ಹಾಗೂ ಹೈ-ಮಾಸ್ಟ್ ದೀಪಗಳನ್ನು ಅಳವಡಿಸಿಕೊಳ್ಳಲಾಗಿದೆ.
ಜಿಬಿಎ - ಪೊಲೀಸ್ ಇಲಾಖೆ ಸಮನ್ವಯ
ಇನ್ನು ಕೋರಮಂಗಲ ಸೇರಿದಂತೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬೆಂಗಳೂರು ಪೊಲೀಸರು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್ ಅವರು ಮಾತನಾಡಿ, ಹೊಸ ವರ್ಷದ ಸಂದರ್ಭದಲ್ಲಿ ನಾಗರಿಕರು ಆಚರಿಸಲು ಯಾವುದೇ ತೊಂದರೆ ಉಂಟಾಗದಂತೆ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ಡಿಸಿಪಿ ಸಾರಾ ಫಾತಿಮಾ ಅವರು ಮಾತನಾಡಿ, ಮಹಿಳೆಯರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಸಂಪೂರ್ಣ ಪ್ರದೇಶವು ಸಿಸಿಟಿವಿ ಕಣ್ಗಾವಲಿನಲ್ಲಿರಲಿದೆ ಎಂದು ತಿಳಿಸಿದರು. ಈ ಪಾದಯಾತ್ರೆಯಲ್ಲಿ ಪಾಲಿಕೆ ಆರೋಗ್ಯ ಅಧಿಕಾರಿಗಳು, ಕಾರ್ಯನಿರ್ವಾಹಕ ಎಂಜಿನಿಯರ್ಗಳು ಹಾಗೂ ಆಗ್ನೇಯ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications