ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್

ಬೆಂಗಳೂರು, ಆ.11 : ಗಾಂರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಅಪಹರಿಸಿದ ಐವರು ದುಷ್ಕರ್ವಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.

ಆ.10ರ ಭಾನುವಾರ ಗಾರ್ಮೆಂಟ್ಸ್ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿದ ಐವರು ಡಿಜೆಹಳ್ಳಿ ಬಳಿಯ ಶ್ಯಾಂಪುರ ಬಳಿ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಜೆ.ಪಿ.ನಗರ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನ ಅನ್ವಯ ದೀಪು, ವಿಕ್ಕಿ, ರಾಘು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.

rape

ಐವರು ಯುವಕರು ಗಾಂಜಾ ಮತ್ತು ಮದ್ಯ ಸೇವಿಸಿದ್ದರು ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ಯುವತಿಯನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿಯೂ ಅತ್ಯಾಚಾರ ಆಗಿರುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಪುಂಡನಿಗೆ ಒದ್ದ ಯುವತಿ, ವಿಡಿಯೋ ನೋಡಿ]

ಅಪಹರಣ ನಡೆದಿಲ್ಲ : ಬಂಧಿತ ಆರೋಪಿಗಳ ಪ್ರಾಥಮಿಕ ವಿಚಾರಣೆ ವೇಳೆ ಅಪಹರಣ ನಡೆದಿಲ್ಲ ಎಂದು ತಿಳಿದುಬಂದಿದೆ. ಬಂಧಿತನಾಗಿರುವ ವಿಕ್ಕಿಗೆ ಯುವತಿಗೆ ಮೊದಲೇ ಪರಿಚಯವಿದ್ದಳು, ಆಕೆಯೊಂದಿಗೆ ಮಾತನಾಡಲು ಕರೆದುಕೊಂಡು ಹೋದಾಗ ಸ್ನೇಹಿತರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳೆಲ್ಲ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದು, ಎಲ್ಲರ ಮೇಲೂ ಜೆ.ಸಿ.ನಗರ ಮತ್ತು ಕೆ.ಜಿ.ಹಳ್ಳಿ ಠಾಣೆಯಲ್ಲಿ ನಾಲ್ಕೈದು ಮೊಕದ್ದಮೆಗಳು ದಾಖಲಾಗಿವೆ. ಇವರೆಲ್ಲರು ಪ್ಲಂಬರ್, ಬಾರ್‌ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+