ಬೆಂಗಳೂರು ಉತ್ತರ ಆಯುಕ್ತರಿಗೆ ಇ - ಖಾತಾ ಸೇರಿ 23 ವಿಷಯಗಳ ಬಗ್ಗೆ ಸಾರ್ವಜನಿಕರಿಂದ ದೂರು!
ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತದಿಂದ ವಿನೂತನ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಬೆಂಗಳೂರಿನ ಉತ್ತರ ನಗರ ಪಾಲಿಕೆ ಆಯುಕ್ತರಿಂದ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಲಾಗಿದೆ.
ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಲ್ಲಿ ನಾಗಾವಾರ ಕುಪ್ಪೆ ಸ್ವಾಮಿ ಬಡಾವಣೆ, ಟಿ. ದಾಸರಹಳ್ಳಿ, ಯಲಹಂಕ ನ್ಯೂ ಟೌನ್‌ನಲ್ಲಿರುವ ಗರುಡಾಮಾಲ್ ಹಿಂಭಾಗ ಸೇರಿದಂತೆ ಹಲವು ಕಡೆ ಹೆಚ್ಚಾಗಿ ಬೀದಿ ನಾಯಿಗಳ ಹಾವಳಿ ಕುರಿತ ಸಮಸ್ಯೆಗಳು ಹೆಚ್ಚಾಗಿ ಕೇಳಿಬಂದಿದೆ. ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎನ್ನುವ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಇದನ್ನು ಗಮನಿಸಿರುವ ಆಯುಕ್ತರು ನಗರ ಪಾಲಿಕೆಯಲ್ಲಿರುವ ಅಕ್ರಮಣಕಾರಿ ಬೀದಿ ನಾಯಿಗಳನ್ನು ಆದ್ಯತೆಯ ಮೇರೆಗೆ ಗುರುತಿಸಿ, ಸೂಕ್ತ ಚಿಕಿತ್ಸೆಗೆ ಒಳಪಡಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಸ್ಥಳದಲ್ಲಿದ್ದ ಪಶುಪಾಲನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇನ್ನು ಸಾರ್ವಜನಿಕರಿಂದ ಬಂದ ದೂರುಗಳಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರಗಳು, ಮರದ ರೆಂಬೆ ಕೊಂಬೆಗಳ ತೆರವು ಕಾರ್ಯದ ಕುರಿತು ಸಹ ಹೆಚ್ಚಾಗಿ ಕಂಡುಬಂದಿದ್ದು, ಮುಂಜಾಗ್ರತಾ ಕ್ರಮ ವಹಿಸಲು ಸ್ಥಳದಲ್ಲಿದ್ದ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ರಸ್ತೆ ಗುಂಡಿಗಳು ಮತ್ತು ರಸ್ತೆ ದುರಸ್ತಿಗಳ ಬಗ್ಗೆಯೂ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಈಗಾಗಲೇ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ಹಗಲು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಆದ್ಯತೆ ಮೇರೆಗೆ ಇನ್ನೂ ತ್ವರಿತವಾಗಿ, ಗುಣಮಟ್ಟವನ್ನು ಕಾಪಾಡಿಕೊಂಡು ಗುಂಡಿ ಮುಚ್ಚುವ ಕಾರ್ಯ ಹಾಗೂ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಆಯುಕ್ತರು ಎಂಜಿನಿಯರ್‌ಗಳಿಗೆ ಸೂಚನೆ ಕೊಡಲಾಗಿದೆ.
ಫೋನ್ ಇನ್ ಕಾರ್ಯಕ್ರಮದಲ್ಲಿ ಕೇಳಿ ಬಂದ ಪ್ರಮುಖ ದೂರುಗಳು
1. ರಸ್ತೆ ಡಾಂಬರೀಕರಣ
2. ರಸ್ತೆ ಗುಂಡಿಗಳು
3. ರಸ್ತೆ ದುರಸ್ತಿ
4. ಬೆಸ್ಕಾಂ /BWSSB ಇಂದ ರಸ್ತೆ ಅಗೆತ
5. ರಸ್ತೆ ಅಗಲೀಕರಣ
5. ಚರಂಡಿ ಹೂಳು
3. ಪಾಲಿಕೆ ಈಜುಕೊಳದಲ್ಲಿ ಅನಧಿಕೃತ ಪಾರ್ಕಿಂಗ್
4. ಇ-ಖಾತಾ
6. ಕಟ್ಟಡ ಅವಶೇಷಗಳ ತೆರವು
7. ಮನೆ ಮನೆ ಕಸ ಸಂಗ್ರಹಣೆ ಆಗುತ್ತಿಲ್ಲ
8. ರಸ್ತೆಯಲ್ಲಿ ಸ್ವಚ್ಚತಾ ಕಾರ್ಯ ನಡೆಯುತ್ತಿಲ್ಲ
9. ರಸ್ತೆಯಲ್ಲಿ ನೀರು ಶೇಖರಣೆ (water logging)
10. Transformer ತೆರವು
11. ಪಾರ್ಕ್ ನಿರ್ವಹಣೆ
12. ಪ್ಲೇ ಗ್ರೌಂಡ್ ನಿರ್ವಹಣೆ
13. ಬೀದಿ ಬೀದಿಗಳ ಅಳವಡಿಕೆ/ದುರಸ್ತಿ/ನಿರ್ವಹಣೆ
14. ಅಪಾಯಕಾರಿ ಮರಗಳ / ರೆಂಬೆ ಕೊಂಬೆಗಳ ತೆರವು
15. ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುತ್ತಿರುವ ಬಗ್ಗೆ & ಕಸದ ಬ್ಲಾಕ್‌ಸ್ಪಾಟ್‌ಗಳು
16. ಕೆರೆ ಮತ್ತು ರಾಜಕಾಲುವೆ ಒತ್ತುವರಿ
17. ಅಟ್ಟೂರು ಬಡಾವಣೆ ಹೆಚ್ಎಂಟಿ ಬಡಾವಣೆಯ ಖಾಲಿ ನಿವೇಶನಗಳಲ್ಲಿ ಅನಧಿಕೃತ ಚಟುವಟಿಕೆಗಳು
18. ಪಾದಚಾರಿ ಮಾರ್ಗ ದುರಸ್ತಿ & ಬೀದಿ ಬದಿ ವ್ಯಾಪಾರಿಗಳಿಂದ ಪಾದಚಾರಿ ಮಾರ್ಗ ಒತ್ತುವರಿ
19. ಕಾವೇರಿ ನೀರಿನ ಪೈಪ್ ಅಳವಡಿಸಿಲ್ಲ
20. ಸಂಚಾರ ದಟ್ಟಣೆ ಸಮಸ್ಯೆ
21. ಕಟ್ಟಡದ ಅವಶೇಷಗಳ ತೆರವು
22. ಹೋಟೆಲ್‌ಗಳಲ್ಲಿ ಸ್ವಚ್ಛತೆ ಇಲ್ಲದಿರುವುದು
23. ಅನಧಿಕೃತವಾಗಿ /ನಿಯಮ ಬಾಹಿರವಾಗಿ ನಿರ್ಮಿಸುತ್ತಿರುವ ಕಟ್ಟಡಗಳ ಬಗ್ಗೆ
ಇನ್ನು ಇಂದು ನಡೆದ ಫೋನ್ ಇನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟಾರೆಯಾಗಿ 53 ದೂರುಗಳನ್ನು ಸ್ವೀಕರಿಸಲಾಗಿದೆ. ಈ ಅಹವಾಲುಗಳನ್ನು ಸಹಾಯ ಪೋರ್ಟಲ್‌ನಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ಇನ್ನು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುವಾಗುವಂತೆ ಹಾಗೂ ನಗರ ಪಾಲಿಕೆಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಪ್ರತಿ ಶುಕ್ರವಾರ ಆಯುಕ್ತರು ಫೋನ್ ಇನ್ ಕಾರ್ಯಕ್ರಮ ಮುಂದುವರಿಸಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಆಯುಕ್ತರು ಸೂಚನೆ ಕೊಟ್ಟಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications