ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಯಂಡಹಳ್ಳಿ ಬಳಿ ಫ್ಲೈಓವರ್ ಗಾಗಿ 25 ಮನೆ ತೆರವು

|
Google Oneindia Kannada News

ಬೆಂಗಳೂರು, ಜು. 2 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಯಂಡಹಳ್ಳಿ ಜಂಕ್ಷನ್ ಬಳಿ ಮೇಲ್ಸೆತುವೆ ನಿರ್ಮಾಣ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದ 25 ಮನೆಗಳನ್ನು ಮಂಗಳವಾರ ನಡೆಸಿದ ಕಾರ್ಯಾಚರಣೆಯಲ್ಲಿ ತೆರವುಗೊಳಿಸಿದೆ. ಈ ಮನೆಗಳಿಂದಾಗಿ ಗಾಳಿ ಆಂಜನೇಯಸ್ವಾಮಿ ದೇವಾಲಯ ಮತ್ತು ಕೆಂಗೇರಿ ನಡುವಿನ ಫ್ಲೈಓವರ್ ನಿರ್ಮಾಣ ಕಾರ್ಯ ವಿಳಂಬವಾಗಿತ್ತು.

ಮಂಗಳವಾರ ನಾಲ್ಕು ಜೆಸಿಬಿ ಯಂತ್ರಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಬಿಡಿಎ ಅಧಿಕಾರಿಗಳು 25 ಮನೆಗಳನ್ನು ತೆರವುಗೊಳಿಸಿದರು. ಹಿಂದಯೇ ಮನೆಯನ್ನು ಖಾಲಿ ಮಾಡುವಂತೆ ಬಿಡಿಎ ಸೂಚನೆ ನೀಡಿದ್ದರಿಂದ ತೆರವು ಕಾರ್ಯಾಚರಣೆಗೆ ಯಾವುದೇ ಅಡ್ಡಿ ಉಂಟಾಗಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿಕೊಂಡಿದ್ದರು.

Nayandahalli

ಈ ಮನೆಗಳಿಂದಾಗಿ ಗಾಳಿ ಆಂಜನೇಯಸ್ವಾಮಿ ದೇವಾಲಯ ಮತ್ತು ಕೆಂಗೇರಿ ನಡುವಿನ ಫ್ಲೈಓವರ್ ನಿರ್ಮಾಣ ಕಾರ್ಯ ವಿಳಂಬವಾಗಿತ್ತು. ಫ್ಲೈಓವರ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಬಿಡಿಎ ಅಧಿಕಾರಿಗಳು ಹೇಳಿದ್ದಾರೆ. [ಅಕ್ಷರಶಃ ಕೆಸರುಗದ್ದೆಯಾಗಿರುವ ನಾಯಂಡಹಳ್ಳಿ ಜಂಕ್ಷನ್]

ಮೂರು ಕಾಮಗಾರಿಗಳು : ನಾಯಂಡನಹಳ್ಳಿ ಜಂಕ್ಷನ್ ಬಳಿ ಬಿಡಿಎ ಮೂರು ಕಾಮಗಾರಿಗಳನ್ನು ನಡೆಸುತ್ತಿದೆ. ಒಂದು ಕಡೆ ಮೆಟ್ರೋ ರೈಲು ಕಾಮಗಾರಿಯಾದರೆ, ಎರಡು ಫ್ಲೈ ಓವರ್ ನಿರ್ಮಾಣ ಕಾರ್ಯವನ್ನು ಬಿಡಿಎ 85 ಕೋಟಿ ವೆಚ್ಚದಲ್ಲಿ ಕೈಗೊಂಡಿದೆ. [ಮೃತ್ಯುರೂಪಿ ನಾಯಂಡಹಳ್ಳಿ ಜಂಕ್ಷನ್ ಹೀಗಿದೆ ನೋಡಿ]

ಈ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ನಾಯಂಡನಹಳ್ಳಿ ಜಂಕ್ಷನ್ ಬಳಿ ವಾಹನ ಸವಾರರು ಪರದಾಡುತ್ತಿದ್ದಾರೆ. ಆದ್ದರಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳ್ಳುವಂತೆ ಮಾಡಲು ಬಿಡಿಎ ಅಡ್ಡಿಯಾಗಿದ್ದ ಮನೆಗಳನ್ನು ತೆರವುಗೊಳಿಸಿದೆ.

English summary
The Bangalore Development Authority (BDA) on Tuesday demolished 25 houses near Nayandahalli junction, paving way for completion of a flyover on Mysore Road between Gali Anjaneya Temple and Kengeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X