Breaking: ರಾಜ್ಯದ ಆರೋಗ್ಯ ಸೌಧದಲ್ಲಿ ಮಾಸ್ಕ್ ಧರಿಸದಿದ್ದರೆ 250 ರೂ. ದಂಡ!

ಬೆಂಗಳೂರು, ಆಗಸ್ಟ್ 11: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಆರೋಗ್ಯ ಸೌಧಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆರೋಗ್ಯ ಸೌಧಕ್ಕೆ ಭೇಟಿ ನೀಡುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಬೇಕು.

ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕಾದ ನಿಯಮವನ್ನು ಉಲ್ಲಂಘನೆ ಮಾಡಿದವರಿಗೆ 250 ರೂಪಾಯಿ ದಂಡವನ್ನು ವಿಧಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯೇ ಈ ಆದೇಶಕ್ಕೆ ಕಾರಣವೆಂದು ಆದೇಶದಲ್ಲಿ ತಿಳಿಸಲಾಗಿದೆ.

250 rupees fine to not wear mask in karnataka Arogya Soudha

ಕರ್ನಾಟಕದಲ್ಲಿ ಕೊರೊನಾ ವೈರಸ್: ರಾಜ್ಯದಲ್ಲಿ ಬುಧವಾರವೊಂದೇ ದಿನದಲ್ಲಿ 1680 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪಕ್ಕಾ ಆಗಿತ್ತು. 5 ಮಂದಿ ಮೃತಪಟ್ಟಿದ್ದು, 2114 ಸೋಂಕಿತರು ಗುಣಮುಖರಾಗಿದ್ದಾರೆ.

250 rupees fine to not wear mask in karnataka Arogya Soudha

ಕರ್ನಾಟಕದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4024394ಕ್ಕೆ ಏರಿಕೆಯಾಗಿದೆ. ಇದುವರೆಗೂ 3973873 ಸೋಂಕಿತರು ಗುಣಮುಖರಾಗಿದ್ದರೆ, ಮಹಾಮಾರಿಗೆ 40128 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 10351 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+