25 ಸಾವಿರ ಬೀದಿ ವ್ಯಾಪಾರಿಗಳಿಗೆ ಶೀಘ್ರ ಗುರುತಿನ ಚೀಟಿ

ಬೆಂಗಳೂರು, ಫೆಬ್ರವರಿ 06 : ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಫೆ.21 ರೊಳಗೆ ಗುರುತಿನ ಚೀಟಿ ವಿತರಿಸುವಂತೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಇನ್ನೊಂದು ವಾರದೊಳಗೆ ಸಮೀಕ್ಷೆ ಮೂಲಕ ಗುರುತಿಸಲಾಗಿರುವ 24,629 ವ್ಯಪಾರಿಗಳಿಗೆ ಗುರುತಿನ ಚೀಟಿಯನ್ನು ನೀಡಲು ಮುಂದಾಗಿದೆ.

ಬೀದಿ ವ್ಯಾಪಾರಿಗಳಿಗೆ ಪೊಲೀಸರು, ಪಾಲಿಕೆ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಬಿಬಿಎಂಪಿ, ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕೃತ ಗುರುತಿನ ಚೀಟಿ ನೀಡಲು ನಿರ್ಧರಿಸಿತ್ತು. ಇದಕ್ಕಾಗಿ ಪಾಲಿಕೆಯ ಎಲ್ಲಾ ಎಂಟು ವಲಯಗಳಲ್ಲಿ ಕೆಲ ತಿಂಗಳಿಂದ ಸಮೀಕ್ಷೆ ನಡೆಸಿ 24,629 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿದೆ.

ಈ ವ್ಯಾಪಾರಿಗಳ ಪಟ್ಟಿಯಲ್ಲಿ ಆಕ್ಷೇಪಣೆ ಸಲ್ಲಿಸಲು ಪಾಲಿಕೆಯ ವಾರ್ಡ್ ಕಚೇರಿ, ಎಆರ್ ಓ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ವಾರದೊಳಗೆ ಅಂತಿಮ ಪಟ್ಟಿ ಸಿದ್ಧಪಡಿಸಿ ಅರ್ಹರಿಗೆ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

25k street vendors will get ID cards soon

ಎಲ್ಲರಿಗೂ ನೀಡಿ: ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ 1.5 ಅಲಕ್ಷಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಪಾಲಿಕೆ ಅಧಿಕಾರಿಗಳು ಮಾತ್ರ ಕೇವಲ 24,629 ಬೀದಿ ಬದಿ ವ್ಯಾಪಾರಿಗಳ ಸರ್ವೆ ಮಾಡಿ ಪಟ್ಟಿ ತಯಾರಿಸಿದ್ದಾರೆ. ಸರ್ವೇ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳುವುದು ಬೇಡ ಹಂತ ಹಂತವಾಗಿ ಸರ್ವೇ ಕಾರ್ಯ ಮುಂದುವರೆಸಿ ಎಲ್ಲ ವ್ಯಾಪಾರಿಗಳಿಗೂ ಗುರುತಿನ ಚೀಟಿ ನೀಡಬೇಕು ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಆಗ್ರಹಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+