ಬೆಂಗಳೂರು : ರಾಜಸ್ಥಾನ ಮೂಲದ ಯುವತಿ ಕೊಲೆ
ಬೆಂಗಳೂರು, ಏ. 11 : ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ಯುವತಿಯನ್ನು ಕೊಲೆ ಮಾಡಲಾಗಿದೆ. ರಾಜನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿನೆ ನಡೆಸುತ್ತಿದ್ದಾರೆ.
ಶನಿವಾರ ಬೆಳಗ್ಗೆ ರಾಜನಕುಂಟೆಯ ಪೆಟ್ರೋಲ್ ಬಂಕ್ ಹಿಂಭಾಗದ ನೀಲಗಿರಿ ತೋಪಿನ ಪೊದೆಯಲ್ಲಿ ಶವ ಪತ್ತೆಯಾಗಿದೆ. ಸುಮಾರು 26 ವರ್ಷ ವಯಸ್ಸಿನ ಯುವತಿಯ ತಲೆ ಮೇಲೆ ಕಲ್ಲುಎತ್ತಿಹಾಕಿ ಕೊಲೆ ಮಾಡಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಯುವತಿ ಶವ ಪತ್ತೆಯಾದ ಜಾಗದ ಸಮೀಪದಲ್ಲಿ ಕಾರು ಬಂದು ಹೋದ ಗುರುತುಗಳಿದ್ದು, ಯುವತಿಯನ್ನು ಅಪಹರಿಸಿ ಕರೆತಂದು ಇಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ತಿಳಿಸಿದ್ದಾರೆ. ಯುವತಿಯ ಹೆಸರು ಮತ್ತು ವಿಳಾಸ ಇನ್ನೂ ಪತ್ತೆಯಾಗಿಲ್ಲ.
ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರಾಜನಕುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.












Click it and Unblock the Notifications