ಪರಿಚಯಸ್ಥನಿಂದಲೇ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕೊಲೆ:ಆರೋಪಿ ಬಂಧನ

ತಾಯಿ ಜೊತೆ ಸಂಬಂಧ ಹೊಂದಿದ್ದ ಯುವಕನೇ ಮೂರು ವರ್ಷದ ಮಗುವನ್ನುಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು, ಫೆಬ್ರವರಿ 1: 26 ವ‍ರ್ಷದ ಯುವಕನೊಬ್ಬ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮೂರು ವರ್ಷದ ಮಗುವಿನ ತಾಯಿ ಬೆಂಗಳೂರಿನ ಖಾಸಗಿ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು, .ಪತಿಯಿಂದ ದೂರಾಗಿ ಮೂರು ವರ್ಷದ ಮಗಳೊಂದಿಗೆ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಕಳೆದ ಒಂದು ವರ್ಷದಿಂದ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ತಾಯಿಯನ್ನು ಭೇಟಿ ಮಾಡಲು ಬರುತ್ತಿದ್ದ ಆರೋಪಿ ಮಗುವಿಗೂ ಪರಿಚಯಸ್ಥ ವ್ಯಕ್ತಿಯೇ ಆಗಿದ್ದ. ಇತ್ತೀಚಿಗೆ ಮಹಿಳೆ ಇಲ್ಲದ ವೇಳೆ ಮನೆಗೆ ಬಂದಿದ್ದ ಆರೋಪಿ, ಮೂರು ವರ್ಷದ ಬಾಲಕಿ ಒಂಟಿಯಾಗಿರುವುದನ್ನು ನೋಡಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಬಾಲಕಿ ಬೇರೆಯವರಿಗೆ ಹೇಳಿದರೆ ಕಷ್ಟ ಎಂದು ಆರೋಪಿ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

26 Year Old Man Arrested For Allegedly Raping A 3 Year Old Child

ಇನ್ನು ಮಹಿಳೆ ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭದಲ್ಲಿ ಮಗು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಕೆ ಆರೋಪಿಗೆ ಕರೆ ಮಾಡಿದ್ದಾಳೆ. ಘಟನಾ ಸ್ಥಳಕ್ಕೆ ಬಂದಿದ್ದ ಆರೋಪಿ ತನಗೆ ವಿಚಾರವೇ ಗೊತ್ತಿಲ್ಲ ಎನ್ನುವಂತೆ ನಟಿಸಿದ್ದಾನೆ. ಬಳಿಕ ಮಹಿಳೆ ಪ್ರಶ್ನೆ ಮಾಡಿದ ಸಂದರ್ಭದಲ್ಲಿ ಆಕೆಯನ್ನು ಸಹ ಹಿಂಸೆ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಅನುಮಾನಗೊಂಡ ಮಹಿಳೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಬಳಿಕ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ದೂರು ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು ಆರೋಪಿ ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದೆ.

ಸದ್ಯ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+