ಕಾಮೆಡ್ ಕೆ ಪರೀಕ್ಷೆ ಬರೆದ ನಕಲಿ ವಿದ್ಯಾರ್ಥಿಗಳು

ಬೆಂಗಳೂರು, ಮೇ.13 : ನಕಲಿ ಪ್ರವೇಶಪತ್ರ ಮತ್ತು ದಾಖಲೆಗಳನ್ನು ಬಳಸಿ ಕಾಮೆಡ್-ಕೆ ಪರೀಕ್ಷೆ ಬರೆಯಲು ನಗರಕ್ಕೆ ಬಂದಿದ್ದ ಹೊರ ರಾಜ್ಯದ 28 ಮಂದಿಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 17 ಮತ್ತು ಭಾನುವಾರ 11 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಅಸಲಿ ಅಭ್ಯರ್ಥಿಗಳ ಸೋಗಿನಲ್ಲಿ ಕಾಮೆಡ್‌-ಕೆ ಪರೀಕ್ಷೆ ಬರೆದಿದ್ದಾರೆ. ತಮ್ಮ ರಾಜ್ಯಗಳಿಗೆ ಹಿಂದಿರುಗಲು ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಪರೀಕ್ಷಾ ಅಕ್ರಮ ಬಗ್ಗೆ ತಿಳಿದುಬಂದಿದೆ.

Comedk

ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊತ್ತಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ವಿದ್ಯಾರ್ಥಿಗಳ ಪ್ರವೇಶ ಪತ್ರ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ತಿಳಿದುಬಂದಿದೆ ಎಂದು ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್‌ ಗೋಯಲ್‌ ಹೇಳಿದ್ದಾರೆ. [ವಿಮಾನ ನಿಲ್ದಾಣ ರಸ್ತೆ ಟೋಲ್ ಶುಲ್ಕ ಕಡಿಮೆ]

ಪರೀಕ್ಷೆ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ 11 ಮಂದಿಯನ್ನು ಹಾಗೂ ಸೋಮವಾರ 17 ಆರೋಪಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳು ಯಾವ-ಯಾವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಸೀಟು ಬ್ಲಾಕಿಂಗ್ ದಂಧೆ ಕೈವಾಡ : ಅಕ್ರಮವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೀಟು ಬ್ಲಾಕಿಂಗ್ ದಂಧೆಗೆ ಸೇರಿದವರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಎಲ್ಲರ ವಿಚಾರಣೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

2013ರಲ್ಲಿಯೂ ಇಂತಹ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿತ್ತು. ಜಾರ್ಖಂಡ್ ಮತ್ತು ಬಿಹಾರದ ಕೆಲವು ಜನರು ದೇಶಾದ್ಯಂತ ವಿದ್ಯಾರ್ಥಿಗಳು ನಕಲಿ ಹೆಸರಿನಲ್ಲಿ ಪರೀಕ್ಷೆ ಬರೆಯಲು ಕಳುಹಿಸುತ್ತಿದ್ದ ಬಗ್ಗೆ ತಿಳಿದುಬಂದಿತ್ತು. ಈಗಾಗಲೇ ಎಂಬಿಬಿಎಸ್ ಓದುತ್ತಿರುವ ವಿದ್ಯಾರ್ಥಿಗಳನ್ನು ನಕಲಿ ಹೆಸರಿನಲ್ಲಿ ಪರೀಕ್ಷೆ ಬರೆಯಲು ಕಳುಹಿಸಿ ಸೀಟು ಬ್ಲಾಕ್ ಮಾಡುವ ವ್ಯಾಪಾರ ನಡೆಯುತ್ತಿರುವುದು ವಿಚಾರಣೆಯಿಂದ ತಿಳಿದುಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+