ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮ ಮೆಟ್ರೋದ 28 ಲೋಕೋ ಪೈಲಟ್‌ಗಳಿಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 30: ನಮ್ಮ ಮೆಟ್ರೋದ 28 ಮಂದಿ ಲೋಕೋ ಪೈಲಟ್‌ಗಳು ಹಾಗೂ ಸ್ಟೇಷನ್‌ ಕಂಟ್ರೋಲರ್‌ಗಳಿಗೆ ಕೊರೊನಾ ಸೋಂಕು ತಗುಲಿದೆ.

Recommended Video

Namma Metro ಸಿಬ್ಬಂದಿಗಳಿಗೆ ಕೊರೊನ ಸೋಂಕು | Oneindia Kannada

ಕೊರೊನಾ ಲಾಕ್‌ಡೌನ್ ಸಡಿಲಗೊಂಡ ಬಳಿಕ ಇದೀಗ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಮಾಡುವುದೇ ದೊಡ್ಡ ಸವಾಲಿನ ಕೆಲಸವಾಗಿರುವ ಈ ಹೊತ್ತಿನಲ್ಲಿ, ಲೋಕೋ ಪೈಲಟ್‌ಗಳಿಗೆ ಸೋಂಕು ತಗುಲಿರುವುದು ಪ್ರಯಾಣಿಕರನ್ನು ಮತ್ತಷ್ಟು ಆತಂಕ್ಕೀಡು ಮಾಡಿದೆ.

ಗುರುವಾರ ಹಸಿರು ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗುರುವಾರ ಹಸಿರು ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ

ಸೆಪ್ಟೆಂಬರ್ 7 ರಿಂದ ನಮ್ಮ ಮೆಟ್ರೋ ಸಂಚಾರ ಆರಂಭಗೊಂಡಿತ್ತು. ಈ ಎಲ್ಲಾ ಪೈಲಟ್‌ಗಳಿಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

28 Namma Metro Loco Pilots, Station Controllers Test Positive For Coronavirus

ಎಲ್ಲರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ. ಕೆಲವರು ಆಸ್ಪತ್ರೆಯಲ್ಲಿದ್ದಾರೆ ಒಟ್ಟಿನಲ್ಲಿ ವೈದ್ಯರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.ಪ್ರತಿ ನಿತ್ಯವೂ ಲೋಕೋಪೈಲಟ್‌ಗಳ ಪರೀಕ್ಷೆ ಮಾಡಿಸುತ್ತದ್ದು, ಆರು ನಿಲ್ದಾಣಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸೋಂಕು ತಗುಲಿದೆ.

ಬೆಳಗ್ಗೆ 7 ರಿಂದ ಸಂಜೆ 9 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚರಿಸಲಿದ್ದು, 450 ಲೋಕೋ ಪೈಲಟ್‌ಗಳು ಹಾಗೂ ಸ್ಟೇಷನ್ ಕಂಟ್ರೋಲರ್‌ಗಳು ಕೆಲಸ ನಿರ್ವಹಿಸುತ್ತಾರೆ. ಕೆಲಸಕ್ಕೆ ಬರುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಹಾಗೂ ಟೆಂಪರೇಚರ್ ಚೆಕ್ ಮಾಡಲಾಗುತ್ತಿದೆ.

ಈ 23 ದಿನದಲ್ಲಿ 6,92,269 ಮಂದಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಮಾರ್ಚ್ 22ಕ್ಕೂ ಮೊದಲು ಪ್ರತಿನಿತ್ಯ 5.1 ಲಕ್ಷ ಮಂದಿ ಸಂಚರಿಸುತ್ತಿದ್ದರು.

English summary
Total of 28 Namma metro loco pilots and station controllers tested positive for COVID-19 following the restart of operations on September 7 and are recuperating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X