ಬೆಂಗಳೂರಿನಲ್ಲಿ ಪಟಾಕಿ ಸಿಡಿದು 29 ಮಂದಿಗೆ ಗಾಯ-ವೈದ್ಯರ ಸಲಹೆಗಳೇನು?
ಬೆಂಗಳೂರು, ನವೆಂಬರ್, 01: ಈಗಾಗಲೇ ದೇಶದ ಹಲವೆಡೆ ಪಟಾಕಿ ಅವಘಡಗಳು ಸಂಭವಿಸಿವೆ. ಹಾಗೆಯೇ ಇದೀಗ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 31ರ ರಾತ್ರಿಯಿಂದ ಪಟಾಕಿ ಅವಘಢದಿಂದ ಗಾಯಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಹಾಗಾದರೆ ಗಾಯಗೊಂಡವರಿಗೆ ಚಿಕಿತ್ಸೆ ಯಾವ ಆಸ್ಪತ್ರೆಯಲ್ಲು ನೀಡಲಾಗುತ್ತಿದೆ ಹಾಗೂ ವೈದ್ಯರ ಸಲಹೆಗಳೇನು ಎಂದು ಇಲ್ಲಿ ತಿಳಿಯಿರಿ.
ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 29 ಮಂದಿ ಗಾಯಗೊಂಡಿದ್ದು, ಕಣ್ಣು ಸೇರಿ ದೇಹದ ಹಲವು ಭಾಗಗಳಿಗೆ ಗಾಯಗಳಾಗಿದೆ. ಇನ್ನು ಗಾಯಗೊಂಡವರಿಗೆ ಮಿಂಟೋ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಗರದಲ್ಲಿ ಪಟಾಕಿ ಸಿಡಿದು ಈವರೆಗೆ 29 ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹತಿ ಲಭ್ಯವಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ. ಗಾಯಗೊಂಡ ಮೂವರು ಮಕ್ಕಳ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ 3 ವರ್ಷದ ಹೆಣ್ಣು ಮಗುವಿನ ಕಣ್ಣಿಗೆ ತಾಗಿ ಕಾರ್ನಿಯಾಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಪಾಲಿಸಬೇಕಾದ ಸಲಹೆಗಳು: ಪಟಾಕಿ ಸಿಡಿಸುವ ಮುನ್ನ ಯಾವುದೇ ಅನಾಹುತ ಆಗದಂತೆ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವುದು ಒಳಿತು. ಇದಕ್ಕೆ ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಕೆ ಮಾಡಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ ಎಂದು ವೈದ್ಯರು ಸಲಹೆಗಳನ್ನು ನೀಡಿದ್ದಾರೆ.
ಹೀಗಿವೆ ವೈದ್ಯರ ಸಲಹೆಗಳು ಹೀಗಿವೆ
1. ಪಟಾಕಿ ಖರೀದಿ ಮಾಡುವುವಾಗ ಐಎಸ್‌ಐ ಪ್ರಮಾಣೀಕರಣದ ಗುರುತಿನ ಹಸಿರು ಪಟಾಕಿಗಳನ್ನು ಖರೀದಿಸಿ.
2. ಪಟಾಕಿ ಬಾಕ್ಸ್ ಮೇಲಿರುವ ಎಚ್ಚರಿಕೆ, ಸೂಚನೆಗಳನ್ನು ಅನುಸರಿಸಿ.
3. ಕನಿಷ್ಠ 2-3 ಅಡಿ ದೂರ ನಿ೦ತು ಪಟಾಕಿ ಹಚ್ಚಿ.
4. ಪಟಾಕಿ ಹಚ್ಚಲು ಉದ್ದನೆಯ ಕೋಲು ಬಳಸಿ.
5. ಮೈದಾನ, ಖಾಲಿ ಜಾಗಗಳಲ್ಲಷ್ಟೇ ಪಟಾಕಿ ಹಚ್ಚಿ.
6. ಬೆಂಕಿ ಹಾಗೂ ಬಿಸಿಯಾಗುವಂತಹ ವಸ್ತುಗಳ ಬಳಿ ಪಟಾಕಿ ಸಂಗ್ರಹಿಸಿಡಬೇಡಿ.
7. ಪಟಾಕಿ ಸುಡುವುದಕ್ಕೆ ಗಾಜಿನ ಬಾಟಲಿಗಳನ್ನು ಬಳಸಬೇಡಿ. ಇದರಿ೦ದ ಸಿಡಿಯುವ ಗಾಜಿನ ಚೂರುಗಳು ಕಣ್ಣಿಗೆ ಹಾನಿ ಮಾಡಬಹುದು.
8. ಮಕ್ಕಳು ಒ೦ಟಿಯಾಗಿ ಪಟಾಕಿ ಸಿಡಿಸುವುದಕ್ಕೆ ಅವಕಾಶ ನೀಡಬೇಡಿ. ಜೊತೆಗೆ ಪೋಷಕರು ಇದ್ದರೆ ಒಳ್ಳೆಯದು.
9. ಪಟಾಕಿ ಸಿಡಿದಾಗ ಕಿಡಿ ಬಿದ್ದರೆ, ಕಣ್ಣನ್ನು ಉಜ್ಜಿಕೊಳ್ಳಬೇಡಿ.
10. ಅರೆಬರೆ ಸುಟ್ಟ ಪಟಾಕಿ ತುಣುಕನ್ನು ಗಾಳಿಯಲ್ಲಿ ಎಸೆಯಬೇಡಿ.
11. ಕೈಯಲ್ಲೇ ಪಟಾಕಿ ಸಿಡಿಸುವ ಸಾಹಸವನ್ನು ಮಾಡಬೇಡಿ.
12. ಅರೆಬರೆ ಸುಟ್ಟ ಪಟಾಕಿಯನ್ನು ಕೈಯಿಂದ ಹೊಸಕಿ ನಂದಿಸಲು ಯತ್ನಿಸಬೇಡಿ.












Click it and Unblock the Notifications