Breaking: ಕೆಂಗೇರಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ, 25 ಮಂದಿಗೆ ಗಾಯ
ಬೆಂಗಳೂರು, ಮೇ 9: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಸಂಭವಿಸಿದೆ. ಬಸ್ ಅಪಘಾತದಲ್ಲಿ 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.













Click it and Unblock the Notifications