Bengaluru Second Airport: 2ನೇ ಏರ್ಪೋರ್ಟ್ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ: ಜಾಗದ ಬಗ್ಗೆ ಎಂ ಬಿ ಪಾಟೀಲ್ ಹೇಳಿದ್ದೇನು?
ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್'ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.
ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಸಚಿವ ಎಂ ಬಿ ಪಾಟೀಲ್ ಅವರು ಮಾತನಾಡಿ, ದೇವನಹಳ್ಳಿಯ ಸಮೀಪದಲ್ಲಿ ಈಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಕ್ರಿಯವಾಗಿದೆ. ಇದು ಆರಂಭವಾಗುವಾಗಲೇ 2033ರವರೆಗೂ 150 ಕಿ.ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಾರದೆಂಬ ಷರತ್ತು ಇದೆ. ಏತನ್ಮಧ್ಯೆ ಹೊಸದೆಹಲಿ ಮತ್ತು ನವೀ ಮುಂಬೈಗಳಲ್ಲಿ ಇಂತಹ ಷರತ್ತುಗಳನ್ನು ಸಡಿಲಿಸಿ, ಎರಡನೆಯ ಏರ್ಪೋರ್ಟುಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಸಂದರ್ಭ ನೋಡಿಕೊಂಡು ಬಗೆಹರಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಒಂದು ವಿಮಾನ ನಿಲ್ದಾಣ ಬರಬೇಕೆಂದರೆ ಸ್ಥಳದ ಆಯ್ಕೆ, ಅದರ ಪರಿಶೀಲನೆ, ಭೂಸ್ವಾಧೀನ, ಪರಿಹಾರ ವಿತರಣೆ ಮುಂತಾದ ಅಂಶಗಳು ಮುಖ್ಯವಾಗುತ್ತವೆ. ಇವೆಲ್ಲವನ್ನೂ ಮುಗಿಸಿಕೊಳ್ಳಲು ಏನಿಲ್ಲವೆಂದರೂ ಐದಾರು ವರ್ಷಗಳು ಬೇಕಾಗುತ್ತವೆ. ಬಿಐಎಎಲ್ ಅನುಮತಿ ಬೇಕಾಗುವುದು ಇವೆಲ್ಲ ಮುಗಿದ ಮೇಲಷ್ಟೆ. ಹೀಗಾಗಿಯೇ ಈಗ ಕರ್ನಾಟಕ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ಮೂಲಕ ಸ್ಥಳದ ಅನುಕೂಲ, ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿಯ ಉದ್ದೇಶಕ್ಕಾಗಿ ಟೆಂಡರ್ ಕರೆಯಲಾಗಿದೆ ಎಂದು ಎಂ ಬಿ ಪಾಟೀಲ್ ಅವರು ವಿವರಿಸಿದ್ದಾರೆ.
ಈ ವರದಿಯನ್ನು ಸರಕಾರಕ್ಕೆ ಸಲ್ಲಿಸಲು 5 ತಿಂಗಳ ಕಾಲಾವಕಾಶ ಕೊಡಲಾಗುವುದು. ಇದನ್ನು ಸಿದ್ಧಪಡಿಸುವಾಗ ಪ್ರಯಾಣಿಕರ ದಟ್ಟಣೆ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಇರುವ ಅವಕಾಶ, ಮೂಲಸೌಕರ್ಯ, ಭೌಗೋಳಿಕ ಲಕ್ಷಣಗಳು, ಮಳೆಯ ಪ್ರಮಾಣ, ಒಳಚರಂಡಿ, ಶಬ್ದ ಮಾಲಿನ್ಯ, ತ್ಯಾಜ್ಯ ನಿರ್ವಹಣೆ ಮುಂತಾದ ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಇದೇನೇ ಇದ್ದರೂ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂಬುದನ್ನು ಸರಕಾರ ಮನಗಂಡಿದೆ ಎಂದು ಎಂ ಬಿ ಪಾಟೀಲ್ ಅವರು ಸ್ಪಷ್ಟಪಡಿಸಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ಇರುವ ಮತ್ತೊಂದು ಸ್ಥಳವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ತಂಡ ಪರಿಶೀಲಿಸಿ, ತನ್ನ ವರದಿಯನ್ನು ನಮಗೆ ನೀಡಿದೆ. ಇದಾದ ನಂತರವೇ ಈಗ ಟೆಂಡರ್ ಆಹ್ವಾನಿಸಲಾಗಿದೆ ಎಂದು ಪಾಟೀಲ ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications