2nd Bengaluru Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಈ ಕಾರಣಕ್ಕೆ ವಿಳಂಬ!

Bengaluru 2nd Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಲವು ಜಾಗಗಳನ್ನು ರಾಜ್ಯ ಸರ್ಕಾರವು ಶಾರ್ಟ್ ಲಿಸ್ಟ್‌ ಮಾಡಿದೆ. ಅಲ್ಲದೇ ಈ ಜಾಗಗಳಿಗೆ ಕೇಂದ್ರ ತಂಡವು ಭೇಟಿ ನೀಡಿದ್ದು ಸ್ಥಳಗಳ ಪರಿಶೀಲನೆಯನ್ನೂ ಮಾಡಿದೆ. ಆದರೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಮುಂದಕ್ಕೆ ಹೋಗುತ್ತಿಲ್ಲ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ವರದಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಇನ್ನೂ ಸಮಯ ಕೇಳಿದೆ. ಈಗಾಗಲೇ ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ವರದಿ ಸಲ್ಲಿಕೆಯಾಗಿದೆ. ಆದರೆ, ಕರ್ನಾಟಕದ ವಿಚಾರದಲ್ಲಿ ತಾರತಮ್ಯ ಮುಂದುವರಿದಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗಲಿದೆ ಎನ್ನುವ ವಿಷಯ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಕಳೆದ ಒಂದು ವರ್ಷದಿಂದಲೂ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಪದೇ ಪದೇ ಚರ್ಚೆಗಳು ಆಗುತ್ತಲ್ಲೇ ಇವೆ. ಆದರೆ, ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾವ ಜಾಗ ಯೋಗ್ಯವಾಗಿದೆ ಎನ್ನುವ ವರದಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಇನ್ನೂ ನೀಡಿಲ್ಲ. ಹೀಗಾಗಿ, ಕರ್ನಾಟಕ ಸರ್ಕಾರವು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಸಮರ್ಪಕ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

2nd Bengaluru Airport Delay due to this reason property boom

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವರದಿ ನೀಡಿದರಷ್ಟೇ ಕರ್ನಾಟಕ ಸರ್ಕಾರವು ಮುಂದಿನ ಪ್ರಕ್ರಿಯೆಗಳನ್ನು ಶುರು ಮಾಡಬಹುದು. ಕೇಂದ್ರ ತಂಡವು ವರದಿ ನೀಡಿದರೆ ಕರ್ನಾಟಕ ಸರ್ಕಾರವು ಮತ್ತೊಂದು ಸುತ್ತಿನ ಚರ್ಚೆಯನ್ನು ನಡೆಸಲಿದೆ. ಇದಾದ ಮೇಲೆ ಜಾಗ ಅಂತಿಮವಾಗಲಿದೆ. ಜಾಗ ಅಂತಿಮವಾದ ಮೇಲೆ ಭೂಸ್ವಾಧೀನ ಪ್ರಕ್ರಿಯೆಗಳು ಶುರುವಾಗಲಿದೆ. ಆದರೆ ಕೇಂದ್ರ ತಂಡವು ಇಲ್ಲಿಯ ವರೆಗೆ ವರದಿ ನೀಡಿಲ್ಲ. ತಮಿಳುನಾಡಿನ ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಕಾಶ ನೀಡಿ, ಕರ್ನಾಟಕದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸರ್ಕಾರವು ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಸಹ ಈ ಸಂದರ್ಭದಲ್ಲಿ ಕೇಳಿ ಬಂದಿದೆ. ಈಗಾಗಲೇ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಪ್ರದೇಶಗಳಲ್ಲಿ 5 ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದೆ.

ನಗರದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ತಂಡವು ಕಾರ್ಯಸಾಧ್ಯತಾ ವರದಿಯನ್ನು ಸಲ್ಲಿಸಬೇಕಿದೆ. ಸಾರ್ವಜನಿಕರಿಗೆ, ಉದ್ಯಮಿಗಳಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತಹ ಸ್ಥಳದಲ್ಲೇ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಿದ್ದೇವೆ ಎಂದು ಕರ್ನಾಟಕ ಸರ್ಕಾರವು ಹೇಳಿದೆ.

ತುಮಕೂರು, ನೆಲಮಂಗಲ, ಬಿಡದಿ, ಹೇರೋಹಳ್ಳಿ, ಜಿಗಣಿ ಮತ್ತು ಕುಣಿಗಲ್ ಪ್ರದೇಶ ಮೊದಲು ಶಾರ್ಟ್‌ ಲಿಸ್ಟ್‌ ಆಗಿತ್ತು. ನಂತರ ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಸ್ಥಳಗಳು ಮತ್ತು ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಸ್ಥಳ ಹಾಗೂ ಮಾಗಡಿಯಲ್ಲೂ ಜಾಗಗಳ ಪರಿಶೀಲನೆ ಆಗಿದೆ. ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ, ನೆಲಮಂಗಲ-ಕುಣಿಗಲ್ ರಸ್ತೆ ಸಹ ಲಿಸ್ಟ್‌ನಲ್ಲಿವೆ.

ತಮಿಳುನಾಡು ಭರ್ಜರಿ ಸಿದ್ಧತೆ: ಇನ್ನು ತಮಿಳುನಾಡಿನ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವು ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎರಡು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+