2 Bengaluru Airport: ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೂತನ ಜಿಲ್ಲೆಯ ಹೆಸರು, ಕೇಂದ್ರಕ್ಕೆ ಪತ್ರ!, ಹೊಸ ಟ್ವಿಸ್ಟ್
2nd Bengaluru Airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬದಲಾವಣೆ ಆಗಿದೆ. ಬೆಮಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರದೇಶಗಳು ಶಾರ್ಟ್ ಲಿಸ್ಟ್ ಆಗಿವೆ. ಆದರೆ ಇದೀಗ ತುಮಕೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಚರ್ಚೆಯ ಮುನ್ನೆಲೆಗೆ ಬಂದಿದೆ. ತುಮಕೂರು ಜಿಲ್ಲೆಯ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಒತ್ತಾಯಿಸಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಹಲವು ಶಾಸಕರು ಒತ್ತಾಯಿಸಿದ್ದರು. ಇದೀಗ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಚರ್ಚೆಯ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಕೇಂದ್ರ ವಿಮಾನಯಾನ ಸಚಿವರಿಗೆ ಪತ್ರ ಬರೆಯಲಾಗಿದೆ. ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕು ಎನ್ನುವುದು ಕರ್ನಾಟಕದ ಬಹುತೇಕ ಜನಪ್ರತಿನಿಧಿಗಳ ಒತ್ತಾಯವಾಗಿದೆ. ಶಿರಾದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದೂ ವಿ. ಸೋಮಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ.

2nd Bengaluru Airport: ಬೆಂಗಳೂರು ಕೇಂದ್ರಿತ ಅಭಿವೃದ್ಧಿ ಸಾಕು
ಇನ್ನು ಬೆಂಗಳೂರು ಕೇಂದ್ರಿತ ಅಭಿವೃದ್ಧಿ ಸಾಕು ಎಂದು ವಿ. ಸೋಮಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕವು ಬೆಂಗಳೂರು ಕೇಂದ್ರಿತವಾಗಿ ಅಭಿವೃದ್ಧಿ ಸಾಧಿಸಿದೆ. ಬೆಂಗಳೂರಿಗೆ ಪರ್ಯಾಯವಾಗಿ ಕರ್ನಾಟಕದ ಎಲ್ಲಾ ಭಾಗಗಳನ್ನು, ನಗರಗಳನ್ನು ಸದೃಢವಾಗಿ ಬೆಳೆಸುವುದು ಜನಪ್ರತಿನಿಧಿಗಳೆಲ್ಲರ ಜವಾಬ್ದಾರಿ ಆಗಿದೆ. ಆ ಹಿನ್ನೆಲೆಯಲ್ಲಿ ಮತ್ತೊಂದು ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪ ನಿರ್ಮಿಸಿದರೆ, ಉತ್ತರ ಮತ್ತು ಮಧ್ಯ ಕರ್ನಾಟಕದ ಅಭಿವೃದ್ಧಿಗೆ ಅನ್ಯಾಯವಾದಂತೆ ಆಗುತ್ತದೆ ಎಂದು ಅವರು ಹೇಳಿದ್ದಾರೆ.
ಮುಂದುವರಿದು ತುಮಕೂರಿನ ಶಿರಾ ಬಳಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಪ್ರಗತಿಗೆ ಸಹಕಾರಿ ಆಗಲಿದೆ. ಶಿರಾದ ಸುತ್ತುಮುತ್ತ ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಹಾಗೂ ಉತ್ಪಾದನಾ ವಲಯ (NIMZ), ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಹಾಗೂ KIADB ಕೈಗಾರಿಕಾ ಪ್ರದೇಶಗಳಿವೆ. ಅಲ್ಲದೇ NH-48, NH-69, NH-544E ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಹಾಗೂ ಹೊಸ ರೈಲು ಮಾರ್ಗಗಳ ಸಾರಿಗೆ ಸಂಪರ್ಕ ಜಾಲವೂ ಬಲವಾಗಿದೆ ಎಂದಿದ್ದಾರೆ.
ಹೆಚ್ಚಿನ ಪ್ರಮಾಣದ ಸರ್ಕಾರಿ ಭೂಮಿ ಲಭ್ಯವಿದ್ದು, ಭದ್ರಾ ಮೇಲ್ದಂಡೆ ಕಾಲುವೆ, ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆಗಳಿಂದ ನೀರಿನ ಲಭ್ಯತೆಯ ಜೊತೆಗೆ ಚಿತ್ರದುರ್ಗದ DRDO, IISc ಕ್ಯಾಂಪಸ್ ಹಾಗೂ ತುಮಕೂರಿನ ಗುಬ್ಬಿಯ HAL ಹೆಲಿಕಾಪ್ಟರ್ ಘಟಕಗಳೂ ಅತ್ಯಂತ ಸಮೀಪದಲ್ಲೇ ಇದೆ.
ಅಲ್ಲದೆ ಶಿರಾದ ಈ ಸ್ಥಳವು DGCA ಯ ನಿಯಮಕ್ಕನುಗುಣವಾಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ಸುಮಾರು 150 ಕಿ.ಮೀ ದೂರವಿದೆ. ಮುಖ್ಯವಾಗಿ ಇಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕದ ಜನರಿಗೆ ಅಂತಾರಾಷ್ಟ್ರೀಯ ಪ್ರಯಾಣ ಹಾಗೂ ಸರಕು ಸಾಗಣೆಗೆ ಅನುಕೂಲವಾಗಲಿದೆ. ಕೈಗಾರಿಕೆ, ಉದ್ಯೋಗ, ಹೂಡಿಕೆ ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ. ಕರ್ನಾಟಕದ ಸಮತೋಲಿತ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.


Click it and Unblock the Notifications
