• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡ್ರೋನ್ ಪ್ರತಾಪ್ ವಿರುದ್ಧ 2ನೇ ಎಫ್‌ಐಆರ್ ದಾಖಲು

|

ಬೆಂಗಳೂರು, ಆಗಸ್ಟ್ 03 : ಸಾಂಸ್ಥಿಕ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕೆ ಡ್ರೋನ್ ಪ್ರತಾಪ್ ವಿರುದ್ಧ 2ನೇ ಎಫ್‌ಐಆರ್ ದಾಖಲಾಗಿದೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಮೊದಲ ಎಫ್‌ಐಆರ್ ದಾಖಲಾಗಿತ್ತು.

   ರಾಮಮಂದಿರ ನಿರ್ಮಾಣಕ್ಕೆ ಮೋದಿ ಅಡಿಗಲ್ಲು | Oneindia Kannada

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ಜೂನ್ 20ರಂದು ಡ್ರೋನ್ ಪ್ರತಾಪ್‌ರನ್ನು ಬೆಂಗಳೂರಿನ ರಿಚ್‌ಮಂಡ್ ಸರ್ಕಲ್ ಸಮೀಪದ ಹೋಟೆಲ್‌ನಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಹಾಕಲಾಗಿತ್ತು. ಆದರೆ, ಕ್ವಾರಂಟೈನ್ ಅವಧಿ ಮುಗಿಯುವ ಮೊದಲೇ ವಕೀಲರನ್ನು ಹೋಟೆಲ್‌ ರೂಂಗೆ ಪ್ರತಾಪ್ ಕರೆಸಿಕೊಂಡಿದ್ದಾರೆ.

   ಕರ್ನಾಟಕದಲ್ಲಿ ಹೋಂ ಕ್ವಾರಂಟೈನ್ ನಿಯಮ ಮುರಿದವರು 3 ಲಕ್ಷ ಜನ!

   ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರುವವರು ಯಾರನ್ನೂ ಭೇಟಿ ಮಾಡುವಂತಿಲ್ಲ. ಹೋಟೆಲ್‌ ರೂಂಗೆ ಯಾರನ್ನೂ ಕರೆಸಿಕೊಳ್ಳುವಂತಿಲ್ಲ. ವಕೀಲರನ್ನು ಕರೆಸಿಕೊಂಡು 1 ತಾಸಿಗೂ ಅಧಿಕ ಕಾಲ ಚರ್ಚೆ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಹೋಂ ಐಸೊಲೇಷನ್‌; ಸೋಂಕಿತರಿಗೆ ಉಚಿತ ಆರೋಗ್ಯ ಕಿಟ್

   ಆದ್ದರಿಂದ, ಬೆಂಗಳೂರು ಪೊಲೀಸರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 51ಬಿ ಅಡಿಯಲ್ಲಿ ಐಪಿಸಿ ಸೆಕ್ಷನ್ 188, 269, 270 ಹಾಗೂ 271 ಅಡಿ ಡ್ರೋನ್ ಪ್ರತಾಪ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   ಡ್ರೋನ್ ಪ್ರತಾಪ್‌ ವಶಕ್ಕೆ, ಬೆಂಗಳೂರಿಗೆ ಕರೆತರುತ್ತಿರುವ ಪೊಲೀಸರು!

   ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಕಾರಣಕ್ಕೆ ಡ್ರೋನ್ ಪ್ರತಾಪ್ ವಿರುದ್ಧ ಪೊಲೀಸರು ಮೊದಲ ಎಫ್‌ಐಆರ್ ದಾಖಲು ಮಾಡಿದ್ದರು. ಬಳಿಕ ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಹಾಕಲಾಗಿತ್ತು.

   ಕ್ವಾರಂಟೈನ್ ನಿಯಮ ಉಲ್ಲಂಘನೆಗೆ ಜಾಮೀನು ನೀಡುವ ಷರತ್ತುಗಳ ಬಗ್ಗೆ ಚರ್ಚಿಸಲು ವಕೀಲರನ್ನು ಕರೆಸಿದ್ದಾಗಿ ಡ್ರೋನ್ ಪ್ರತಾಪ್ ಹೇಳಿದ್ದಾರೆ. ಆದರೆ, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರುವಾಗ ಜಾಮೀನಿನ ಪ್ರಶ್ನೆ ಬರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

   English summary
   Bengaluru police registered the 2nd FIR against Drone Prathap for violating institutional quarantine rules. He met the lawyer in hotel during institutional quarantine.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X