Bengaluru Second Airport: 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಭಾವಿ ಸಚಿವರ ನಡುವೆ ಮುಸುಕಿನ ಗುದ್ದಾಟ!
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ರಾಜ್ಯದ ಇಬ್ಬರು ಪ್ರಮುಖ ಸಚಿವರ ನಡುವೆಯೇ ಜಿದ್ದಾಜಿದ್ದಿ ಪೈಪೋಟಿ ಶುರುವಾಗಿದೆ. ಇಬ್ಬರು ಪ್ರಮುಖ ಸಚಿವರ ಮುಸುಕಿನ ಗುದ್ದಾಟ ಮುಂದುವರಿದಿದೆ.
ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಪ್ರಸ್ತಾಪಿಸಲಾಗಿರುವ ಪ್ರಮುಖ ಯೋಜನೆಗಳಲ್ಲಿ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವೂ ಪ್ರಮುಖವಾಗಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ವಿಳಂಬ ಮುಂದುವರಿದಿದೆ. ಇಲ್ಲಿಯ ವರೆಗೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾವ ಜಾಗ ನಿಗದಿಯಾಗಿದೆ ಎನ್ನುವುದು ಅಂತಿಮವಾಗಿಲ್ಲ.

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದೀಗ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಒತ್ತಡಗಳು ಬಂದರೂ ಸಹ ಸಚಿವ ಎಂ.ಬಿ ಪಾಟೀಲ್ ಅವರು ತಮ್ಮ ನಿಲುವಿನಿಂದ ಹಿಂದೆ ಸರಿದಿಲ್ಲ. ಕರ್ನಾಟಕದ ಮತ್ತೊಂದು ಹಾಗೂ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ಸಮೀಪದಲ್ಲಿ ನಿರ್ಮಾಣ ಮಾಡಬಾರದು.
ನಗರದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಮಾಡಬೇಕು, ತುಮಕೂರು ಹಾಗೂ ಶಿರಾ ಭಾಗದಲ್ಲಿ ನಿರ್ಮಾಣ ಮಾಡಬೇಕು - ಚಿತ್ರದುರ್ಗ ಸಹ ಇದಕ್ಕೆ ಸೂಕ್ತವಾದ ಸ್ಥಳ ಎನ್ನುವುದು ಸೇರಿದಂತೆ ಹಲವು ಒತ್ತಡಗಳು ಹಾಗೂ ಶಾಸಕರು ಮತ್ತು ಜನಾಭಿಪ್ರಾಯ ಸೃಷ್ಟಿಯಾಗಿತ್ತು. ಆದರೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ದಿಷ್ಟ ಹಾಗೂ ಸೂಕ್ತ ಪ್ರದೇಶದಲ್ಲೇ ನಿರ್ಮಾಣ ಮಾಡುವುದಾಗಿ ಎಂ.ಬಿ ಪಾಟೀಲ್ ಅವರು ಹೇಳಿದ್ದರು. ಇದೀಗ ಡಿ.ಕೆ ಶಿವಕುಮಾರ್ ಅವರು ಸಜೆಸ್ಟ್ ಮಾಡಿರುವ ಪ್ರದೇಶದ ಬಗ್ಗೆಯೂ ಸಚಿವರು ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.
ಬೆಂಗಳೂರು ದಕ್ಷಿಣ ಪ್ರದೇಶ ಇನ್ನೂ ಅಂತಿಮವಲ್ಲ: ಇನ್ನು ಕೆಲವೇ ದಿನಗಳ ಮುಂಚೆಯಷ್ಟೇ ಉಪ ಮುಖ್ಯ ಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಭಾಗದಲ್ಲೇ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಹೇಳಿದ್ದರು. ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಆದರೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಯನ್ನು ಸಚಿವ ಎಂ.ಬಿ ಪಾಟೀಲ್ ಅವರು ತಣ್ಣಗೆ ತಳ್ಳಿ ಹಾಕಿದ್ದಾರೆ.
ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆ ಮುಂದುವರಿದಿದೆ. ಅಲ್ಲದೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರು ದಕ್ಷಿಣ ಪ್ರದೇಶ ಅಂತಿಮವಾಗಿಲ್ಲ. ಇದು ಸುದೀರ್ಘ ಪ್ರತಿಕ್ರಿಯೆ ಎಂದೂ ಅವರು ಹೇಳಿದ್ದಾರೆ. ಈ ಮೂಲಕ ಇಬ್ಬರು ಪ್ರಭಾವಿ ಸಚಿವರ ನಡುವೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಸುಕಿನ ಗುದ್ದಾಟ ಪ್ರಾರಂಭವಾದಂತಾಗಿದೆ.
ಇನ್ನು ಇದೇ ಕಾರಣಕ್ಕೆ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ವಿಳಂಬವಾಗುತ್ತಿದೆ ಎಂದೂ ಹೇಳಲಾಗುತ್ತಿದೆ.












Click it and Unblock the Notifications