ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ

ಬೆಂಗಳೂರು, ಆಗಸ್ಟ್ 01: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳ ಮರುಮೌಲ್ಯಮಾಪನ ಮತ್ತು ಮರು ಏಣಿಕೆಯ ಪ್ರಕ್ರಿಯೆ ಮುಕ್ತಾಯವಾಗಿ ಜುಲೈ 31ರಂದು ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡಲಾಗಿತ್ತು. ಇದೀಗ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಮಾಡಿಕೊಟ್ಟಿದೆ. ಪರೀಕ್ಷಾ ಶುಲ್ಕವನ್ನು ಪಾವತಿ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಮಾಡಿಕೊಟ್ಟಿದೆ.

ಏಪ್ರಿಲ್ ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಏಣಿಕೆ ಪ್ರಕ್ರಿಯೆಯ ಫಲಿತಾಂಶವನ್ನು ಜುಲೈ 31ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಪ್ರಕಟಿಸಿದ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಗಸ್ಟ್‌ 2022ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಈ ಹಿಂದಿನ ದಂಡ ಶುಲ್ಕದೊಂದಿದೆ ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02.08.2022 ರಿಂದ 04.08.2022ರವರೆಗೆ ದಿನಾಂಕವನ್ನು ವಿಸ್ತರಿಸಿ ಆದೇಶವನ್ನು ಮಾಡಲಾಗಿದೆ.

2nd Puc Supplementary 2022 Exam registration date extended untill August 04

ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ ವಿದ್ಯಾರ್ಥಿಗಳ ಮಾಹಿತಿಯನ್ನು ದಿನಾಂಕ 05.08.2022ರ ಒಳಗೆ ಸ್ಯಾಟ್ಸ್ ತಂತ್ರಾಂಶದಲ್ಲಿ ಎಂಟ್ರಿಯನ್ನು ಮಾಡಲು ತಿಳಿಸಿದೆ. ದಿನಾಂಕ 05.08.2022ರಂದೇ ಕೆ2 ಚಲನ್ ಮೂಲಕ ಖಜಾನೆಗೆ ಶುಲ್ಕವನ್ನು ಸಂದಾಯ ಮಾಡಿ ಅದೇ ದಿನದಂದು ವಿದ್ಯಾರ್ಥಿಗಳು ನೀಡಿ ಪರೀಕ್ಷಾ ಅರ್ಜಿಗಳು , ಚೆಕ್ ಲಿಸ್ಟ್ ಮತ್ತು ಚಲನ್ ಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಲು ತಿಳಿಸಿದೆ.

ಜಿಲ್ಲಾ ಉಪನಿರ್ದೇಶಕರುಗಳು ಪ್ರಾಂಶುಪಾಲರಿಂದ ಸ್ವೀಕರಿಸಿದ ಅರ್ಜಿಗಳನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಚೆಕ್ ಲಿಸ್ಟ್ ಪರಿಶೀಲಿಸಬೇಕು. ಪ್ರಾಂಶುಪಾಲರಿಂದ ಮುಚ್ಚಳಿಕೆ ಪಡೆದು ನಂತರ ಕಾಲೇಜುವಾರು ಕ್ರೋಢಿಕೃತ ಪಟ್ಟಿಯನ್ನು, ಹಣವನ್ನು ಪಾವತಿಸಿದ ಮೂಲ ಚಲನ್ ಹಾಗೂ ಮುಚ್ಚಳಿಕೆ ಪತ್ರವನ್ನು ದಿನಾಂಕ 06.08.2022ರಂದು ಕೇಂದ್ರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+