ದೇವನಹಳ್ಳಿಯಲ್ಲಿ ವಿಶೇಷ ಕಾರ್ಯಾಚರಣೆ; ಬಾಲ ಕಾರ್ಮಿಕರ ರಕ್ಷಣೆ
ಬೆಂಗಳೂರು, ನವೆಂಬರ್ 05: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅರಿವು ಮೂಡಿಸುತ್ತಿದೆ. ಈ ವೇಳೆ ಮೂವರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಮಕ್ಕಳ ಸಹಾಯವಾಣಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ದೇವನಹಳ್ಳಿ ತಾಲೂಕಿನ ಬೂದಿಗೆರೆಯ ಗ್ಯಾರೇಜ್, ಬೇಕರಿ, ಹೂವಿನ ಅಂಗಡಿ, ಹಣ್ಣು ಮತ್ತು ತರಕಾರಿ ಅಂಗಡಿಗಳಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳದಂತೆ ಅರಿವು ಮೂಡಿಸಲಾಯಿತು. ತಪಾಸಣೆ ನಡೆಸಿದಾಗ ಕಾರ್ಯಾಚರಣೆ ವೇಳೆ ಮೂವರು ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ.

ರಕ್ಷಣೆ ಮಾಡಿದ ಮೂವರು ಮಕ್ಕಳಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಡೆಯುತ್ತಿರುವ ಓಪನ್ ಶೆಲ್ಟರ್‌ನಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ. ನವೆಂಬರ್ 2 ಹಾಗೂ 3ರಂದು ನೆಲಮಂಗಲ ಪಟ್ಟಣದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಐವರು ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹೇಮಾವತಿ, ಕಾರ್ಮಿಕ ನಿರೀಕ್ಷಕಿ ಅಂಬಿಕಾ, ಬೂದಿಗೆರೆ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಂತಾದವರು ಪಾಲ್ಗೊಂಡಿದ್ದರು.












Click it and Unblock the Notifications