ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಅಕ್ರಮ ಧಾರ್ಮಿಕ ಕಟ್ಟಡಗಳ ಸಮೀಕ್ಷೆಗೆ 3 ದಿನ ಗಡುವು

|
Google Oneindia Kannada News

ಬೆಂಗಳೂರು,ಜನವರಿ 21:ಅಕ್ರಮ ಧಾರ್ಮಿಕ ಕಟ್ಟಡಗಳ ಸಮೀಕ್ಷೆಗೆ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಮೂರು ದಿನಗಳ ಗಡುವು ನೀಡಿದ್ದಾರೆ.

ರಸ್ತೆ,ಪಾದಚಾರಿ ಮಾರ್ಗ,ಉದ್ಯಾನ,ಮೈದಾನ, ಸರ್ಕಾರಿ ಜಾಗ ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಮಂದಿರ, ಚರ್ಚ್,ಮಸೀದಿ,ಗುರುದ್ವಾರ ಸೇರಿದಂತೆ ಧಾರ್ಮಿಕ ಕಟ್ಟಡಗಳ ಸಮೀಕ್ಷೆ ಮಾಡಿ ಮೂರು ದಿನಗಳೊಳಗೆ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

ಬೆಂಗಳೂರು ರಸ್ತೆ ಗುಂಡಿ ಬಗ್ಗೆ ವಾಟ್ಸಾಪ್ ಮಾಡಿ,ಹೈಕೋರ್ಟ್ ತಲುಪುತ್ತೆ ಬೆಂಗಳೂರು ರಸ್ತೆ ಗುಂಡಿ ಬಗ್ಗೆ ವಾಟ್ಸಾಪ್ ಮಾಡಿ,ಹೈಕೋರ್ಟ್ ತಲುಪುತ್ತೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಧಾರ್ಮಿಕ ಕಟ್ಟಡ ನಿರ್ಮಾಣ ಮಾಡಿರುವ ಸಂಬಂಧ ವಿಶೇಷ ಆಯುಕ್ತರು, ಜಂಟಿ ಆಯುಕ್ತರು, ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ 2009ರಲ್ಲಿ ಆದೇಶಿಸಿತ್ತು.

Bengaluru: 3 Day Deadline For Survey Of Ollegal Religious Buildings

ಸಮೀಕ್ಷೆ ನಡೆಸುವಾಗ 2009ರ ಮುನ್ನ ಹಾಗೂ 2009ರ ನಂತರ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳನ್ನು ಎಲ್ಲಾ ವಾರ್ಡ್ ಎಂಜಿನಿಯರ್ ಹಾಗೂ ಕಂದಾಯ ಅಧಿಕಾರಿಗಳು ಸಮರ್ಪಕವಾಗಿ ಸಮೀಕ್ಷೆ ನಡೆಸಿ ವರದಿ ನೀಡಬೇಕು.

ಜತೆಗೆ 2009ರ ನಂತರ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳಿಗೆ ಜನವರಿ 27ರ ಒಳಗೆ ನೋಟಿಸ್ ನೀಡಬೇಕು, ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಿದವರಿಂದ ಒಂದು ವಾರದೊಳಗೆ ಸಮಜಾಯಷಿ ಪಡೆಯಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಕಟ್ಟಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Recommended Video

Vijayapura: ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ padayatraಗೆ ಚಾಲನೆ | Oneindia Kannada

ನಗರದಲ್ಲಿ ಅನಧಿಕೃತವಾಗಿ ಧಾರ್ಮಿಕ ಕಟ್ಟಡ ನಿರ್ಮಾಣ ಕುರಿತು ಜ.28ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ಇರುವ ಕಾರಣ ಕೋರ್ಟ್‌ಗೆ ನಿಖರವಾಗಿ ಮಾಹಿತಿ ನೀಡಲು ಮೂರು ದಿನಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ತಿಳಿಸಿದ್ದಾರೆ.

English summary
BBMP Commissioner N Manjunath Prasad has given a three-day deadline for surveying illegal religious buildings
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X