ಕರ್ನಾಟಕದಲ್ಲಿರುವ ಬಿಹಾರಿಗರಿಗೆ 3 ದಿನ ವೇತನ ಸಹಿತ ರಜೆ, ಡಿಸಿಎಂ ಡಿ.ಕೆ ಶಿವಕುಮಾರ್ ಪತ್ರ!
Bihar Assembly Election 2025: ಬಿಹಾರ ವಿಧಾನಸಭೆ ಚುನಾವಣೆ ವಿಚಾರವು ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನೂಂದು ವಾರ ಬಾಕಿ ಉಳಿದಿರುವಾಗಲೇ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಹಾರದವರನ್ನು ಮೆಚ್ಚಿಸುವುದಕ್ಕೆ ಹಾಗೂ ಕರ್ನಾಟಕದಲ್ಲಿರುವ ಬಿಹಾರಿಗರನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸುವಂತೆ ಹುರಿದುಂಬಿಸುತ್ತಿದ್ದಾರೆ. ಇದೀಗ ಕರ್ನಾಟಕದಲ್ಲಿರುವ ಬಿಹಾರದವರಿಗೆ ಮೂರು ದಿನ ವೇತನ ಸಹಿತ ರಜೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿದ್ದಾರೆ ಎನ್ನಲಾದ ಪತ್ರವು ಭಾರೀ ಚರ್ಚೆಯನ್ನು ಸೃಷ್ಟಿ ಮಾಡಿದೆ.
ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ-2025 ನವೆಂಬರ್ 06/11/2025 ಮತ್ತು 11/11/2025 ರಂದು ನಡೆಯಲಿದೆ. ಬಿಹಾರದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು, ಬಿಲ್ಡರ್‌ಗಳು ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ಉದ್ದಮೆದಾರರು ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಮತವನ್ನು ಚಲಾಯಿಸಲು ಅನುವಾಗುವಂತೆ ಬಿಹಾರ ರಾಜ್ಯದ ಮತದಾರರಾದವರಿಗೆ ಕನಿಷ್ಟ ಮೂರು ದಿನಗಳ "ವೇತನ ಸಹಿತ ರಜೆ" ಯನ್ನು ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಹಕರಿಸಲು ಕೋರುತ್ತೇನೆ ಎಂದು ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಈಚೆಗೆ ಸಹ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈ ವಿಚಾರವಾಗಿ ಮಾತನಾಡಿದ್ದು ಸಹ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರು ಪತ್ರ ಬರೆದಿರುವುದು ಹಲವರ ಹುಬ್ಬೇರಿಸುವಂತೆ ಮಾಡಿದೆ. ರಾಹುಲ್ ಗಾಂಧಿ ಅವರ ಮನವೊಲಿಸಲು ಕರ್ನಾಟಕದ ತೆರಿಗೆ ಹಣವನ್ನು ಪರ್ಸೆಂಟೇಜ್ ಲೆಕ್ಕದಲ್ಲಿ ಲೂಟಿ ಹೊಡೆದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಹಾರಕ್ಕೆ ಅಕ್ರಮವಾಗಿ ಹಣ ತಲುಪಿಸಿದ್ದಾರೆ.
ಈಗ ಕಾಂಗ್ರೆಸ್ ಹೈಕಮಾಂಡ್ ಆಜ್ಞೆ ಮೇರೆಗೆ ಬಿಹಾರದಲ್ಲಿ ಕಾಂಗ್ರೆಸ್ ಪರವಾಗಿ ಮತಚಲಾಯಿಸಲು ಕರ್ನಾಟಕದಲ್ಲಿರುವ ವಲಸಿಗ ಬಿಹಾರಿಗಳಿಗೆ ವೇತನ ಸಹಿತ 3 ದಿನಗಳ ರಜೆ ಕೊಡಿಸುತ್ತಿದ್ದೀರಿ. ರಾಜ್ಯದ ವಾಣಿಜ್ಯೋದ್ಯಮಿಗಳು, ಬಿಲ್ಡರ್‌ಗಳು ಮತ್ತು ಗುತ್ತಿಗೆದಾರರಿಂದ ಹೆದರಿಸಿ, ಬೆದರಿಸಿ ಕಮಿಷನ್ ವಸೂಲಿ ಮಾಡಿ ಬಿಹಾರ ಚುನಾವಣೆ ಎದುರಿಸಲು ಹೊರಟಿದ್ದೀರಿ.
ಡಿಕೆಶಿ ಅವರೇ ನೀವು ಕರ್ನಾಟಕದ ಜನರ ಪರವಾಗಿ ಕೆಲಸ ಮಾಡುತ್ತಿದ್ದೀರೋ, ಬಿಹಾರಕ್ಕೆ ಮಾಡುತ್ತಿದ್ದೀರೋ. ಮೊದಲು ನಿಮಗೆ ಮತಹಾಕಿ ಗೆಲ್ಲಿಸಿದ ಕರ್ನಾಟಕದ ಜನರ ಸಂಕಷ್ಟಕ್ಕೆ ಸ್ಪಂದಿಸಿ, ಕನ್ನಡಿಗರನ್ನು ಉಳಿಸಿ ಎಂದು ಜೆಡಿಎಸ್ ಪಕ್ಷವು ಟ್ವೀಟ್ ಮಾಡಿದ್ದು. ಡಿ.ಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.












Click it and Unblock the Notifications