ನಟಿ ಸಂಜನಾ ಗಲ್ರಾನಿ ಮತ್ತೆ 3 ದಿನ ಸಿಸಿಬಿ ಪೊಲೀಸ್ ವಶಕ್ಕೆ
ಬೆಂಗಳೂರು, ಸೆಪ್ಟೆಂಬರ್ 14: ನಟಿ ಸಂಜನಾ ಗಲ್ರಾನಿಯನ್ನು 3 ದಿನಗಳ ಕಾಲ ಮತ್ತೆ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ರಾಗಿಣಿ ದ್ವಿವೇದಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಸಿಬಿ ಪೊಲೀಸರು ಸೋಮವಾರ ರಾಗಿಣಿ ದ್ವಿವೇದಿ, ಸಂಜನಾ ಸೇರಿದಂತೆ 6 ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಇಬ್ಬರೂ ನಟಿಯರು ಸೇರಿದಂತೆ ಎಲ್ಲಾ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತು.
ಆದರೆ, ಸಿಸಿಬಿ ಪೊಲೀಸರು ನಟಿ ಸಂಜನಾ ಗಲ್ರಾನಿಯನ್ನು ಮತ್ತೆ ಸಿಸಿಬಿ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ 3 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿತು.

ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸೆಪ್ಟೆಂಬರ್ 8ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಬಳಿಕ ಅಂದು ಸಂಜೆ ಆಕೆಯನ್ನು ಬಂಧಿಸಿದ್ದರು. ಬಳಿಕ ಅವರನ್ನು ಸಿಸಿಬಿ ಪೊಲೀಸರ ವಶಕ್ಕೆ ನೀಡಲಾಗಿತ್ತು. ರಾಗಿಣಿ ಮತ್ತು ಸಂಜನಾರನ್ನು ಸಾಂತ್ವನ ಕೇಂದ್ರದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.
ಸಂಜನಾ ವಿಚಾರಣೆ ಇನ್ನೂ ಬಾಕಿ ಇರುವ ಕಾರಣ ಅವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಪೊಲೀಸರು ಅವರ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಸೋಮವಾರ ಕೋವಿಡ್ ಪರೀಕ್ಷೆಯನ್ನು ಸಹ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ನಟಿ ಸಂಜನಾ ಇನ್ನೂ ಜಾಮೀನು ಪಡೆಯಲು ಅರ್ಜಿಯನ್ನು ಸಲ್ಲಿಕೆ ಮಾಡಿಲ್ಲ. ಮಂಗಳವಾರ ಅವರ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.












Click it and Unblock the Notifications