ಮೋದಿ ಸಮಾವೇಶಕ್ಕೆ 3.46 ಲಕ್ಷ ನೋಂದಣಿ
ಬೆಂಗಳೂರು, ನ.8 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಬೆಂಗಳೂರಿನ ಭಾರತ ಗೆಲ್ಲಿಸಿ ಸಮಾವೇಶಕ್ಕೆ ಇದುವರೆಗೂ 3.46 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಆಗದವರು ಆಗಮಿಸುವುದರಿಂದ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ನೋಂದಣಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನ.17ರ ಭಾನುವಾರ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಭಾರತ ಗೆಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದ ಕುರಿತು ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನೋಂದಣಿ ಕುರಿತು ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು. ರಾಜ್ಯಾದ್ಯಂತ 3.46 ಲಕ್ಷ ಜನರು ನೋಂದಣಿ ಇದುವರೆಗೂ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ, ತಾಲೂಕು ಹಾಗೂ ಮಂಡಲ ಘಟಕಗಳಿಗೆ 5 ಲಕ್ಷ 10 ರೂ.ಗಳ ಕೂಪನ್ ರಸೀದಿ ಕಳುಹಿಸಿತ್ತು. ಆನ್‌ಲೈನ್‌ನಲ್ಲೂ ಪ್ರತ್ಯೇಕ ನೋಂದಣಿ ಆಗುತ್ತಿದೆ. ನೋಂದಣಿ ಆಗದವರೂ ಮೋದಿ ಸಮಾವೇಶಕ್ಕೆ ಬರಲಿದ್ದಾರೆ. ಹಾಗಾಗಿ, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಆತಂಕವಿರುವುದರಿಂದ ನೋಂದಣಿ ಸ್ಥಗಿತಗೊಳಿಸಲು ಚಿಂತಿಸಲಾಗಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ನೋಂದಣಿಗಾಗಿ ಒಟ್ಟು ಐದು ಲಕ್ಷ ರಸೀದಿಗಳನ್ನು ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಹಾಗೂ ಮಂಡಲ ಘಟಕಗಳಿಗೆ ರವಾನಿಸಲಾಗಿತ್ತು. ಈ ಪೈಕಿ ಈಗಾಗಲೇ 3.46 ಲಕ್ಷ ಜನ ನೋಂದಣಿ ಮಾಡಿಸಿಕೊಂಡಿದ್ದು, ಅದರ ಹಣವೂ ತಲುಪಿದೆ. ಆನ್‌ಲೈನ್ ನೋಂದಣಿ ಸಂಖ್ಯೆ ಪ್ರತ್ಯೇಕವಾಗಿದೆ ಎಂದರು.
ನೋಂದಣಿ ಮಾಡಿಕೊಂಡವರನ್ನು ಹೊರತುಪಡಿಸಿ ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸಮಾವೇಶ ಆಯೋಜಿಸಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಬಹುದು. ಹೀಗಾಗಿ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನ.17ರ ಸಮಾವೇಶಕ್ಕಾಗಿ 8 ವಿಶೇಷ ರೈಲುಗಳನ್ನು ಓಡಿಸುವ ಸಂಬಂಧ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಮತ್ತು ಈ ಕುರಿತ ಮುಂಗಡ ಹಣವನ್ನೂ ಪಾವತಿ ಮಾಡಲಾಗಿದೆ. ಈ ವಿಶೇಷ ರೈಲುಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಸಮಾವೇಶಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರೂ ಆಗಮಿಸುತ್ತಾರೆ ಎಂದು ಮಾಹಿತಿ ನೀಡಿದರು.
ನರೇಂದ್ರ ಮೋದಿ ಸಮಾವೇಶ ಆನ್ ಲೈನ್ ನೋಂದಣಿಗಾಗಿ ಭೇಟಿ ನೀಡಿ ಕರ್ನಾಟಕ ಬಿಜೆಪಿಯ http://bjpkarnataka.org/namo-in-bangalore/ ವೆಬ್ ಸೈಟಿಗೆ ಭೇಟಿ ನೀಡಬಹುದು.












Click it and Unblock the Notifications