ಬಿಬಿಎಂಪಿಯಲ್ಲಿ 4 ಕೋಟಿ ರು ಹಗರಣ; 3 ಅಧಿಕಾರಿಗಳ ಅಮಾನತು
ಬೆಂಗಳೂರು, ಫೆಬ್ರವರಿ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾಮಗಾರಿಗಳ ಬಿಲ್ ಪಾವತಿಯಲ್ಲಿ ಹಗರಣ ನಡೆಸಿದ ಬಿಬಿಎಂಪಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಕುರಿತು ಗುರುವಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಮಹದೇವಪುರ ವಿಭಾಗಕ್ಕೆ ಸಂಬಂಧಿಸಿದಂತೆ ರೂ.4,42,82,551 ಗಳನ್ನು ಆನ್ ಲೈನ್ ಮೂಲಕ ಪಾವತಿಸುವಾಗ ಅಕ್ರಮ ಎಸಗಿ, ಹಣ ದುರುಪಯೋಗ ಮಾಡಿಕೊಂಡ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಲಾಗಿದೆ. ಹಾಗೂ ಪ್ರಕರಣದ ಕುರಿತು ಪೊಲೀಸರು FIR ದಾಖಲಿಸಿದ್ದಾರೆ ಎಂದು ತಿಳಿಸಿದೆ.
ಬಿಬಿಎಂಪಿ ಲೆಕ್ಕಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೆಕ್ಕ ಅಧೀಕ್ಷರಾದ ಅನಿತಾ ಹಾಗೂ ರಾಮಮೂರ್ತಿ, ದ್ವಿತೀಯ ದರ್ಜೆ ಸಹಾಯಕರಾದ ರಾಘವೇಂದ್ರ ಎನ್ನುವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸುಮಾರು ನಾಲ್ಕು ಕೋಟಿ ರುಪಾಯಿವರೆಗೆ ಹಗರಣ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ತನಿಖೆ ನಡೆಸಿದ್ದ ಆಯುಕ್ತರು, ಈ ಕ್ರಮ ಕೈಗೊಂಡಿದ್ದಾರೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.












Click it and Unblock the Notifications