GAIL Pipeline Leak : ಗೈಲ್ ಗ್ಯಾಸ್ ಪೈಪ್ ಲೈನ್ ಕಟ್, ಮೂವರಿಗೆ ಗಂಭೀರ ಗಾಯ, 2 ಮನೆಗಳಿಗೂ ಹಾನಿ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಯಡವಟ್ಟಿನಿಂದ, ಗ್ಯಾಸ್ ಪೈಪ್ ಲೈನ್ ನಿರ್ದಿಷ್ಟ ಭಾಗದಲ್ಲಿ ಸ್ಪೋಟಿಸಿದ್ದರಿಂದ ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನಲ್ಲಿ ಗುರುವಾರ ನಡೆದಿದೆ.
ಬೆಂಗಳೂರು, ಮಾರ್ಚ್ 16: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಯಡವಟ್ಟಿನಿಂದ, ಗ್ಯಾಸ್ ಪೈಪ್ ಲೈನ್ ನಿರ್ದಿಷ್ಟ ಭಾಗದಲ್ಲಿ ಸ್ಪೋಟಿಸಿದ್ದರಿಂದ ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನಲ್ಲಿ ಗುರುವಾರ ನಡೆದಿದೆ.
#Karnataka #Bengaluru
— Kiran Parashar (@KiranParashar21) March 16, 2023
3 persons were seriously injured after a GAIL pipeline broke and gas leaked into a couple of houses causing an explosion in HSR layout 7th sector. BWSSB was digging the road when the pipe broke. @IndianExpress pic.twitter.com/Qddfbi1npG
ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ 07 ನೇ ಹಂತದಲ್ಲಿ ಈ ಘಟನೆ ಜರುಗಿದೆ. ಈ ವೇಳೆ ಇಬ್ಬರು ಮಹಿಳೆರು ಮತ್ತು ಒಬ್ಬ ಪುರುಷ ಸೇರಿದಂತೆ ಮೂವರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಜಲಮಂಡಳಿ ವತಿಯಿಂದ ಎಚ್‌ಎಸ್‌ಆರ್ ಬಡಾವಣೆಯ ಏಳನೇ ಹಂತದಲ್ಲಿ ಗುಂಡಿ ತೆಗೆಯಲಾಗುತ್ತಿತ್ತು. ಈ ವೇಳೆ ಗುಂಡಿ ತೆಗೆಯುತ್ತಿದ್ದ ಉದ್ದೇಶಿತ ಸ್ಥಳದಲ್ಲಿ 'ಗೇಲ್ ಗ್ಯಾಸ್ ಪೈಪ್ ಲೈನ್' ಹಾದು ಹೋಗಿತ್ತು. ಅಲ್ಲಿ ಗುಂಡಿ ತೆಗೆಯುತ್ತಿದ್ದ ವೇಳೆ ಗೇಲ್ ಪೈಪ್‌ಗೆ ಒಡೆದು ಗ್ಯಾಸ್ ಸ್ಪೋಟಿಸಿದೆ. ಇದರ ಪರಿಣಾಮ ಎರಡು ಮನೆಗಳಿಗೆ ಆಗಿದ್ದು, ಒಟ್ಟು ಮೂವರಿಗೆ ಗಂಭೀರ ಗಾಯಗಳಾಗಿವೆ.
ಕೂಡಲೇ ಎಚ್ಚೆತ್ತ ಅಲ್ಲಿನ ಸಿಬ್ಬಂದಿಯೊಬ್ಬರು ಗ್ಯಾಸ್ ವಾಲ್ ಅನ್ನು ಬಂದ್ ಮಾಡಿದ್ದಾರೆ ಎನ್ನಲಾಗಿದೆ. ಗುಂಡಿ ತೆಗೆಯುವ ಮುನ್ನ ಬೆಂಗಳೂರು ಜಲಮಂಡಳಿಯು (BWSSB) ಗೇಲ್ ಮುಖ್ಯಸ್ಥರ ಬಳಿ ಅನುಮತಿ ಪಡೆದಿರಲಿಲ್ಲ. ಈ ಕಾರಣದಿಂದಲೇ ಕಾಮಗಾರಿ ವೇಳೆ ಪೈಪ್‌ಲೈನ್ ಬ್ಲಾಸ್ಟ್ ಆಗಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಗ್ಯಾಸ್ ಪೈಪ್ ಸ್ಪೋಟಿಸಿದ ರಭಸಕ್ಕೆ ಎರಡು ಮನೆಗಳ ಕಟ್ಟಡಗಳಿಗೆ ಹಾನಿ ಉಂಟಾಗಿದೆ. ಹೊರಗಿದ್ದ ಶೌಚಾಲಯದ ಕಟ್ಟಡಗಳಿಗೂ ಹಾನಿ ಆಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್‌ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ












Click it and Unblock the Notifications