ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬರಲಿದೆ ಮೂರು ವರ್ಷದ ಎಂಬಿಬಿಎಸ್ ಕೋರ್ಸ್

|
Google Oneindia Kannada News

ಬೆಂಗಳೂರು, ಡಿ.27 : ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ನೀಗಿಸಲು ಮೂರು ವರ್ಷದ ವೈದ್ಯಕೀಯ ಪದವಿ ಕೋರ್ಸ್‌ ಆರಂಭಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದರಿಂದ ಗ್ರಾಮೀಣ ಪ್ರದೇಶಗಳ ಜನರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಶುಕ್ರವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಗುಲಾಂ ನಬಿ ಅಜಾದ್, ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ಇದೆ ಎಂದು ರಾಜ್ಯಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಇದನ್ನು ಪರಿಶೀಲಿಸಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Ghulam Nabi Azad

ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಸೇವೆಯನ್ನು ಕಡ್ಡಾಯಗೊಳಿಸುವ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದು, ವಿಧೇಯಕಕ್ಕೆ ಒಪ್ಪಿಗೆ ಪಡೆಯಲು ಶೀಘ್ರವೇ ಪ್ರಯತ್ನಿಸುತ್ತೇವೆ ಎಂದು ಅಜಾದ್ ತಿಳಿಸಿದರು. ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿರುವುದಕ್ಕೆ ವೈದ್ಯಕೀಯ ಸೌಲಭ್ಯಗಳ ಕೊರತೆಯೂ ಬಹುಮುಖ್ಯ ಕಾರಣವಾಗಿದೆ.

ದೇಶದ ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ನೀಗಿಸಲು ಮೂರು ವರ್ಷದ ಎಂಬಿಬಿಎಸ್ ಕೋರ್ಸ್ ಆರಂಭಿಸಲು ಕೇಂದ್ರ ಚಿಂತನೆ ನಡೆಸಿದೆ ಎಂದು ಅಜಾದ್ ಹೇಳಿದರು. ಯುಪಿಎ ಸರ್ಕಾರ ರಾಜ್ಯಗಳಿಗೆ ಎಲ್ಲ ಸಹಕಾರ ನೀಡಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಉತ್ತಮಪಡಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಸೇವೆಗಳನ್ನು ಉತ್ತಮ ಪಡಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಜಾದ್ ಮೆಚ್ಚುಗೆ ಸೂಚಿಸಿದರು. ಶಿಶು ಮರಣ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ತಾಯಂದಿರ ಮರಣ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಂಡು ಯಶಸ್ವಿಯಾಗಿರುವ ಐದು ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಶಿಶು ಹಾಗೂ ತಾಯಿ ಮರಣ ಕಡಿಮೆ ಮಾಡಲು ಹೆಚ್ಚುವರಿಯಾಗಿ 25 ತಾಯಿ-ಮಕ್ಕಳ ಘಟಕಗಳನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಅನುಮತಿ ಕೋರಿದೆ. ಇದನ್ನು ಈಡೇರಿಸುತ್ತೇವೆ ಎಂದು ಹೇಳಿದರು.

English summary
Voicing concern over the poor state of rural health services, Government will introduce 3 year MBBS course said Union Health Minister Ghulam Nabi Azad. On Friday, December 27 he addressed media at Bangalore and said, health ministry is consider to launching a special medical course of three years to bring out doctors to man primary healthcare centers in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X