ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ

ಬೆಂಗಳೂರು, ಆಗಸ್ಟ್, 05 : ಇಂದಿರಾನಗರದ ಖಾಸಗಿ ಶಾಲೆಯ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಲ್ಕತಾ ಮೂಲದ 30 ವರ್ಷದ ಗೌತಮ್ ಬಂಧಿತ ಆರೋಪಿ. ಈತ ಇದೇ ಶಾಲೆಯಲ್ಲಿ 4 ವರ್ಷಗಳಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನ್ನು ಒಪ್ಪಿಕೊಂಡ ಈತನ ಮೇಲೆ ಪ್ರಕರಣ ದಾಖಲಿಸಿ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಸತೀಶ್ ಕುಮಾರ್ ಹೇಳಿದ್ದಾರೆ.[ಮೂರು ವರ್ಷದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ]

3-year-old raped in Bengaluru, school watchman held

ಗೌತಮ್ ಕುರಿತಾಗಿ ಪೊಲೀಸರಿಗೆ ಮಾಹಿತಿ ನೀಡಿದ ಬಾಲಕಿಯ ಅಕ್ಕ 'ಈತ ಬಾಲಕಿಯ ಹೆಸರನ್ನು ಕರೆದು ಅವಳನ್ನು ತರಗತಿಯಿಂದ ಹೊರಗೆ ಕರೆಸಿಕೊಂಡ ಈತ ಚಾಕಲೇಟ್ ಕೊಡುವುದಾಗಿ ಹೇಳಿ ತನ್ನ ಕಾಲಿನ ಮೇಲೆ ಕೂರಿಸಿಕೊಂಡು ಮುದ್ದಾಡಿದ್ದನು' ಎಂದು ತಿಳಿಸಿದ್ದಾಳೆ.

ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದ ಬಾಲಕಿಯ ಪೋಷಕರು ನೀಡಿದ್ದ ದೂರಿನ ಆಧಾರದ ಮೇಲೆ ಹಾಗೂ ಅಕ್ಕಳಿಂದ ಮಾಹಿತಿ ಕಲೆಹಾಕಿದ ಪೊಲೀಸರು ಗಾರ್ಡ್‌ನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಶಿಕ್ಷೆಗೆ ಗುರಿಪಡಿಸಲು ಮುಂದಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪುಟ್ಟ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮಕ್ಕಳ ಸುರಕ್ಷತೆಗಾಗಿ ಶಾಲೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಾರ್ಗಸೂಚಿ ನೀಡಿ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿತ್ತು. ಆದರೆ ಶಾಲಾ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸದಿರುವುದೇ ಈ ಕೃತ್ಯ ನಡೆಯಲು ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+