ಆರ್ಆರ್ನಗರ ಚುನಾವಣೆ: 300 ಭಿಕ್ಷುಕರಿಂದ ಮತದಾನ
ಬೆಂಗಳೂರು, ಮೇ 29: ನಗರದ ರಾಜರಾಜೇಶ್ವರಿನಗರ ವಿಧಾನಸಭೆ ಚುನಾವಣೆ ಇಂದು ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಈ ಬಾರಿ ವಿಶೇಷವಾಗಿ ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿರುವ 300 ಭಿಕ್ಷುಕರು ತಮ್ಮ ಹಕ್ಕನ್ನು ಚಲಾಯಿಸಿದರು.
ಇಲ್ಲಿಯವರೆಗೆ ಶೇ.41ರಷ್ಟು ಮತದಾನವಾಗಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸನಗರದಲ್ಲಿ ಭಿಕ್ಷುಕರು ಮತಚಲಾವಣೆ ಮಾಡಿದರು.
ಮೇ 12ರಂದು ರಾಜ್ಯಾದ್ಯಂತ ಸಾವ್ರತ್ರಿಕ ವಿಧಾನಸಭೆ ಚುನಾವಣೆ ನಡೆದಿದೆ. ಆದರೆ ರಾಜರಾಜೇಶ್ವರಿ ನಗರ, ಜಯನಗರದಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಅವರು ಮೃತರಾದ ಕಾರಣ ಮುಂದೂಡಲಾದರೆ ಇನ್ನು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಅಪಾರ್ಟ್ಮೆಂಟ್ ಒಂದರಲ್ಲಿ 10 ಸಾವಿರಕ್ಕೂ ಹೆಚ್ಚು ಮತದಾರರ ಚೀಟಿ ಪತ್ತೆಯಾಗಿತ್ತು ಹೀಗಾಗಿ ಅಲ್ಲಿನ ಚುನಾವಣೆಯನ್ನು ಮುಂದೂಡಲಾಗಿತ್ತು. ಆರ್ಆರ್ ನಗರ ಚುನಾವಣೆ ಫಲಿತಾಂಶ 31ಕ್ಕೆ ಹೊರಬೀಳಲಿದೆ.

ಇನ್ನು ಜಯನಗರದಲ್ಲಿ ಜೂನ್ 11ರಂದು ಚುನಾವಣೆ ನಡೆಯಲಿದ್ದು, 16ರಂದು ಫಲಿತಾಂಶ ಬರಲಿದೆ. ಮೇ 12 ರಂದು ನಡೆದ ಚುನಾವಣೆ ಸಂದರ್ಭದಲ್ಲಿ ನಿಮ್ಹಾನ್ಸ್ನ ಏಳು ಮಂದಿ ರೋಗಿಗಳಿಗೆ ವೈದ್ಯರ ಸಮ್ಮತಿ ಮೇರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುರುವುದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications