ಕೊರೊನಾ: ದೆಹಲಿ ಮಸೀದಿ ಪ್ರಾರ್ಥನೆಯಲ್ಲಿ ಕರ್ನಾಟಕದ 300 ಜನ ಇದ್ದರು!

ಬೆಂಗಳೂರು, ಏಪ್ರೀಲ್ 1: ಕರ್ನಾಟಕದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರು ಬೆನ್ನಲ್ಲೇ, ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಕರ್ನಾಟಕದ 300 ಜನ ಭಾಗವಹಿಸಿದ್ದರು ಎಂಬ ಆತಂಕಕಾರಿ ಸಂಗತಿ ಬಹಿರಂಗಗೊಂಡಿದೆ.

ದೆಹಲಿ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ್ದರ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಸದ್ಯ ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುತ್ತಿದೆ. ಇದರಲ್ಲಿ 12 ಜನರ ಪರೀಕ್ಷೆ ವರದಿ ನೆಗಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

300 Karnataka People Was Participeted In Nizamuddin Mosque Prayer Minister B Sriramulu tweet

ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ‌ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+