ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಸಿದ್ದರಾಮಯ್ಯ ಆ್ಯಪ್' ಗೆ ಹರಿದು ಬಂದ ದೂರು-ಸಲಹೆ

|
Google Oneindia Kannada News

ಬೆಂಗಳೂರು, ಜನವರಿ 17: ರಾಜ್ಯದ ನಾಗರಿಕರಿಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 'ಸಿದ್ದರಾಮಯ್ಯ' ಆ್ಯಪ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಳೆದ ಎರಡು ತಿಂಗಳಿನಲ್ಲಿ 30 ಸಾವಿರಕ್ಕೂ ಅಧಿಕ ನಾಗರಿಕರು ಸಿದ್ದರಾಮಯ್ಯ ಅಪ್ಲಿಕೇಷನ್ ತಮ್ಮ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಈ ಕುರಿತು ಜನವರಿ 1 ರಂದು ಅಪ್ಲಿಕೇಷನ್ ನ ವಿಶ್ಲೇಷಣೆ ನಡೆಸಿರುವ ಕಾರ್ಯಾಲಯ ಅಪ್ಲಿಕೇಷನ್ ಗೆ ವ್ಯಕ್ತವಾಗಿರುವ ಪ್ರತಿಕ್ರಿಯೆಯನ್ನು ಪಟ್ಟಿ ಮಾಡಿದೆ.

ಜನ ಸಂಪರ್ಕಕ್ಕೆ ಸಿದ್ದರಾಮಯ್ಯರಿಂದ ಹೊಸ ಆ್ಯಪ್ಜನ ಸಂಪರ್ಕಕ್ಕೆ ಸಿದ್ದರಾಮಯ್ಯರಿಂದ ಹೊಸ ಆ್ಯಪ್

ಒಟ್ಟು 31,359 ನಾಗರಿಕರು ಸಿದ್ದರಾಮಯ್ಯ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಡಿದ್ದು ಆ ಪೈಕಿ 1780 ಜನರು ತಮ್ಮ ಕಳಕಳಿ ವ್ಯಕ್ತಪಡಿಸಿದ್ದಾರೆ ಸುಮಾರು 2,300 ಸಾವಿರ ಜನರು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ.

30k citizens download Siddaramaiah App

ಸರ್ಕಾರದಲ್ಲಿ ಸಾರ್ವಜನಿಕರ ಸಹಭಾಗಿತ್ವ ಉದ್ದೇಶದಿಂದ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳುವಂತೆ ಎಸ್ ಎಂ ಎಸ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಮನವಿ ಮಾಡಿತ್ತು.

ಈ ಮನವಿಗೆ ಸ್ಪಂದಿಸಿ ಅದಕ್ಕೆ ಪ್ರತಿಕ್ರಿಯೆಯಾಗಿ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಂಡವರ ಸಂಖ್ಯೆ 31,359 ಈ ಪೈಕಿ ಆಂಡ್ರಾಯ್ಡ್ ಮೊಬೈಲ್ ಗಳ ಮೂಲಕ ವಿವಿಧ ಇಲಾಖೆಗಳ ಕುರಿತಂತೆ 1634 ದೂರು ಗಳು ಬಂದಿವೆ.

ಆ ಪೈಕಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಂಬಂಧಿಸಿದಂತೆ 130 ವಿವಿಧ ಇಲಾಖೆಗಳ 119 ಲೋಕೋಪಯೋಗಿ ಇಲಾಖೆ ೯೨ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂಧಿಸಿದ 91 ಸಲಹೆಗಳು ಬಂದಿವೆ. ಐಓಎಸ್ ಮಾದರಿ ಮೊಬೈಲ್ ಫೋನ್ ಮೂಲಕ 149 ದೂರುಗಳು ಬಂದಿದ್ದರೆ ಅದರಲ್ಲಿ ಲೋಕೋಪಯೋಗಿಗೆ ಸೇರಿದ 20 ಇತರೆ ಇಲಾಖೆಯ 14 ಸಾರಿಗೆ ಇಲಾಖೆಯ 10 ಇನ್ನು ಅಪ್ಲಿಕೇಷನ್ ಕುರಿತಂತೆ ಕೆಲವರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಸಿದ್ದರಾಮಯ್ಯ ಹೆಸರಿನಲ್ಲಿ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿ ಆ್ಯಪ್ ಎಂಬ ಹೆಸರಿನಲ್ಲಿ ಅಪ್ಲಿಕೇಷನ್ ಬಿಡುಗಡೆ ಮಾಡಬೇಕಿತ್ತು ಎಂದು ಸಲಹೆ ನೀಡಿದ್ದಾರೆ. ಕೆಲವರು ಸಿದ್ದರಾಮಯ್ಯ ಅಪ್ಲಿಕೇಷನ್ ಎಂಬ ಹೆಸರಿನಲ್ಲಿ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

English summary
More than 30 thousand citizens of the state have been downloaded Siddaramaiah App from play store which state Government had launched early in October last year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X