ಬೆಂಗಳೂರಿನ ಮಲ್ಲೇಶ್ವರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ
ಬೆಂಗಳೂರು, ಜೂನ್ 18: ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ, ಗಣೇಶ್(31) ಮೃತರು. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಗಣೇಶ್ ಮೂಲತಃ ಬೆಂಗಳೂರಿನವರೇ ಆಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು, ಕಳೆದ ಕೆಲವು ದಿನಗಳ ಹಿಂದೆ ಒಬ್ಬರ ಬಳಿ ಜಗಳವಾಗಿತ್ತು. ಅವರೇ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿದೆ.

ರಾತ್ರಿ ಫೂಟ್‌ಪಾತ್ ಮೇಲೆ ನಡೆದುಕೊಂಡು ಬರುವ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಗಣೇಶ್‌ನನ್ನು ಕೊಲೆ ಮಾಡಿದ್ದಾರೆ. ನಿಜವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ವೈಯಾಲಿಕಾವಲ್ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.












Click it and Unblock the Notifications