ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೈಟ್ ಕರ್ಫ್ಯೂ ಉಲ್ಲಂಘನೆ: ಬೆಂಗಳೂರಿನಲ್ಲಿ 318 ವಾಹನ ಜಪ್ತಿ

|
Google Oneindia Kannada News

ಬೆಂಗಳೂರು, ಜ. 01: ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಆಗುವುದು ಗ್ಯಾರಂಟಿ. ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೇವಲ 24 ತಾಸಿನಲ್ಲಿ 318 ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.

ಅದರಲ್ಲೂ ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದದಲ್ಲಿ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿದೆ. ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ವಿಧಿಸಿ ಸರ್ಕಾರ ಆದೇಶಿಸಿದೆ. ಅದರಲ್ಲೂ ಜನ ಸಂದಣಿ ಇರುವ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ನೈಟ್ ಕರ್ಫ್ಯೂ ಜಾರಿಗೆ ಸೂಚಿಸಲಾಗಿತ್ತು. ಹೊಸ ವರ್ಷದ ಆಚರಣೆ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿತ್ತು. ಜನರಲ್ಲಿ ಜಾಗೃತಿ ಮೂಡಿಸಲಾಗಿತ್ತು. ಇದರ ನಡುವೆಯೂ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದ 318 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಐದು ಗಂಟೆ ವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಓಡಾಡುವಂತಿಲ್ಲ. ರಾತ್ರಿ ಪಾಳಿ ಕೆಲಸಗಾರರಿಗೆ, ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ. ಅನಾವಶ್ಯಕ ಕಾರು- ಬೈಕ್ ನಲ್ಲಿ ಓಡಾಡುವರ ವಾಹನ ಜಪ್ತಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಸೂಚಿಸಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ನೈಟ್ ಕರ್ಫ್ಯೂ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದರು.

Bengaluru: 318 vehicles seized for violating night curfew guidelines

ನೈಟ್ ಕರ್ಫ್ಯೂ ಉಲ್ಲಂಘನೆ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಅತಿ ಹೆಚ್ಚು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಎರಡು ದಿನದಲ್ಲಿ 116 ದ್ವಿಚಕ್ರ ವಾಹನ, 3 ತ್ರಿಚಕ್ರ ವಾಹನ, 19 ಕಾರು ಸೇರಿ ಒಟ್ಟು 136 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಅದೇ ರೀತಿ ಪಶ್ಚಿಮ ವಿಭಾಗದ ಪೊಲೀಸರು ಕೂಡ 104 ದ್ವಿಚಕ್ರ ವಾಹನ ಸೇರಿ, 113 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಉಳಿದಂತೆ ಉತ್ತರ ವಿಭಾಗದ ಪೊಲೀಸರು 12 ಪ್ರಕರಣ ಸೇರಿ ಒಟ್ಟು 318 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿ ಮಾಡಲಾಗಿರುವ ವಾಹನಗಳನ್ನು ಸಾರ್ವಜನಿಕರು ಬಿಡಿಸಿಕೊಳ್ಳಬೇಕಾದರೆ, ಸಂಬಂಧ ಪಟ್ಟ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು. ಸಂಬಂಧಿತ ನ್ಯಾಯಾಲಯಕ್ಕೆ ದಂಡ ಪಾವತಿಸಿ ವಾಹನ ಪಡೆಯಬೇಕು. ಪೊಲೀಸರ ಎಚ್ಚರಿಕೆ ನಡುವೆಯೂ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದವರಗೆ ವಾಹನ ಜಪ್ತಿ ಬಿಸಿ ಮುಟ್ಟಿಸಲಾಗುತ್ತಿದೆ.

Bengaluru: 318 vehicles seized for violating night curfew guidelines

ಮುಂದಿನ ಎಂಟು ದಿನ ಕಾರ್ಯಾಚರಣೆ:

ಜ. 8 ರ ವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅಲ್ಲಿಯ ವರೆಗೂ ಪೊಲೀಸರು ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇಂದಿನಿಂದ ನೈಟ್ ಕರ್ಫ್ಯೂ ನಿಯಮ ಮತ್ತಷ್ಟು ಬಿಗಿಗೊಳಿಸಲಾಗುತ್ತಿದ್ದು, ನಿಯಮ ಉಲ್ಲಂಘನೆ ಮಾಡುವರ ವಾಹನ ಜಪ್ತಿಯಾಗಲಿದೆ.

English summary
Bangalore Police have confiscated 318 vehicles on charges of violating the Night Curfew Rule in just 24 hours know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X