ಬೆಂಗಳೂರು; ಒಂದೇ ವಾರ್ಡ್ 37 ಪೌರ ಕಾರ್ಮಿಕರಿಗೆ ಕೋವಿಡ್ ಸೋಂಕು
ಬೆಂಗಳೂರು, ಆಗಸ್ಟ್ 05: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ರ‍್ಯಾಂಡಮ್ ಟೆಸ್ಟ್ ನಡೆಸುತ್ತಿದೆ. ನಗರದ ಒಂದೇ ವಾರ್ಡ್‌ನ 37 ಪೌರ ಕಾರ್ಮಿಕರಿಗೆ ಕೋವಿಸ್ ಸೋಂಕು ತಗುಲಿರುವುದು ಖಚಿತವಾಗಿದೆ.
Recommended Video
ಬಿಬಿಎಂಪಿ ವ್ಯಾಪ್ತಿಯ ರಾಯಪುರ ವಾರ್ಡ್‌ನ 37 ಪೌರ ಕಾರ್ಮಿಕರಿಗೆ ಕೋವಿಡ್ ಸೋಂಕು ತಗುಲಿದೆ. ಯಾರಲ್ಲಿಯೂ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಆದ್ದರಿಂದ, ಬಿಐಇಸಿಯ ಕೋವಿಡ್ ಕೇರ್ ಸೆಂಟರ್‌ಗೆ ಎಲ್ಲರನ್ನೂ ಕಳಿಸಲಾಗಿದೆ.
ರಾಯಪುರ ವಾರ್ಡ್‌ನಲ್ಲಿ ಕಾರ್ಯ ನಿರ್ವಹಣೆ ಮಾಡುವ ಎಲ್ಲಾ ಪೌರ ಕಾರ್ಮಿಕರಿಗೆ ರ‍್ಯಾಂಡಮ್ ಟೆಸ್ಟ್ ಮಾಡಲಾಗಿತ್ತು. ಈ ಪರೀಕ್ಷೆಯ ವರದಿ ಬುಧವಾರ ಬಂದಿದ್ದು, ಸೋಂಕು ತಗುಲಿರುವುದು ಪತ್ತೆಯಾಗಿದೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ರಾಯಪುರ ವಾರ್ಡ್ ಬರುತ್ತದೆ. ಪೌರ ಕಾರ್ಮಿಕರ ಕುಟುಂಬಕ್ಕೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಭರವಸೆ ನೀಡಿದ್ದಾರೆ.
ಎಲ್ಲಾ ಪೌರ ಕಾರ್ಮಿಕರ ಕುಟುಂಬಕ್ಕೆ ಒಂದು ತಿಂಗಳಿಗೆ ಬೇಕಾದ ದಿನಸಿ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕರು ಭರವಸೆ ನೀಡಿದ್ದಾರೆ. ಶಾಸಕರ ಭರವಸೆ ಬಳಿಕ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್‌ಗೆ ಕಳಿಸಲಾಗಿದೆ.
ಬೆಂಗಳೂರು ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 63,033. ಸಕ್ರಿಯ ಪ್ರಕರಣಗಳ ಸಂಖ್ಯೆ 34,021. ಬಿಬಿಎಂಪಿ ಪೌರ ಕಾರ್ಮಿಕರಿಗೆ ರ‍್ಯಾಂಡಮ್ ಟೆಸ್ಟ್ ಮಾಡುತ್ತಿದೆ.












Click it and Unblock the Notifications