ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಒಂದೇ ವಾರ್ಡ್‌ 37 ಪೌರ ಕಾರ್ಮಿಕರಿಗೆ ಕೋವಿಡ್ ಸೋಂಕು

|
Google Oneindia Kannada News

ಬೆಂಗಳೂರು, ಆಗಸ್ಟ್ 05: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ರ‍್ಯಾಂಡಮ್ ಟೆಸ್ಟ್ ನಡೆಸುತ್ತಿದೆ. ನಗರದ ಒಂದೇ ವಾರ್ಡ್‌ನ 37 ಪೌರ ಕಾರ್ಮಿಕರಿಗೆ ಕೋವಿಸ್ ಸೋಂಕು ತಗುಲಿರುವುದು ಖಚಿತವಾಗಿದೆ.

Recommended Video

Yediyurappa watched Ram mandir bhumi puja at Manipal hospital | Oneindia Kannada

ಬಿಬಿಎಂಪಿ ವ್ಯಾಪ್ತಿಯ ರಾಯಪುರ ವಾರ್ಡ್‌ನ 37 ಪೌರ ಕಾರ್ಮಿಕರಿಗೆ ಕೋವಿಡ್ ಸೋಂಕು ತಗುಲಿದೆ. ಯಾರಲ್ಲಿಯೂ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಆದ್ದರಿಂದ, ಬಿಐಇಸಿಯ ಕೋವಿಡ್ ಕೇರ್ ಸೆಂಟರ್‌ಗೆ ಎಲ್ಲರನ್ನೂ ಕಳಿಸಲಾಗಿದೆ.

ಶುಭ ಸುದ್ದಿ; ಬೆಂಗಳೂರಲ್ಲಿ ಕೋವಿಡ್ ಸೋಂಕು ಗುಣಮುಖ ಹೆಚ್ಚಳ ಶುಭ ಸುದ್ದಿ; ಬೆಂಗಳೂರಲ್ಲಿ ಕೋವಿಡ್ ಸೋಂಕು ಗುಣಮುಖ ಹೆಚ್ಚಳ

ರಾಯಪುರ ವಾರ್ಡ್‌ನಲ್ಲಿ ಕಾರ್ಯ ನಿರ್ವಹಣೆ ಮಾಡುವ ಎಲ್ಲಾ ಪೌರ ಕಾರ್ಮಿಕರಿಗೆ ರ‍್ಯಾಂಡಮ್ ಟೆಸ್ಟ್ ಮಾಡಲಾಗಿತ್ತು. ಈ ಪರೀಕ್ಷೆಯ ವರದಿ ಬುಧವಾರ ಬಂದಿದ್ದು, ಸೋಂಕು ತಗುಲಿರುವುದು ಪತ್ತೆಯಾಗಿದೆ.

ಕೊರೊನಾವೈರಸ್ ಬಗ್ಗೆ ಡೋಂಟ್ ಕೇರ್ ಎನ್ನುತ್ತಿದೆಯಾ ಬಿಬಿಎಂಪಿ? ಕೊರೊನಾವೈರಸ್ ಬಗ್ಗೆ ಡೋಂಟ್ ಕೇರ್ ಎನ್ನುತ್ತಿದೆಯಾ ಬಿಬಿಎಂಪಿ?

37 Pourakarmikas Of Rayapura Ward Tested Positive For COVID 19

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ರಾಯಪುರ ವಾರ್ಡ್ ಬರುತ್ತದೆ. ಪೌರ ಕಾರ್ಮಿಕರ ಕುಟುಂಬಕ್ಕೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಭರವಸೆ ನೀಡಿದ್ದಾರೆ.

ಬೆಂಗಳೂರಿನ ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ಮಾರ್ಗಸೂಚಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ಮಾರ್ಗಸೂಚಿ

ಎಲ್ಲಾ ಪೌರ ಕಾರ್ಮಿಕರ ಕುಟುಂಬಕ್ಕೆ ಒಂದು ತಿಂಗಳಿಗೆ ಬೇಕಾದ ದಿನಸಿ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕರು ಭರವಸೆ ನೀಡಿದ್ದಾರೆ. ಶಾಸಕರ ಭರವಸೆ ಬಳಿಕ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್‌ಗೆ ಕಳಿಸಲಾಗಿದೆ.

ಬೆಂಗಳೂರು ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 63,033. ಸಕ್ರಿಯ ಪ್ರಕರಣಗಳ ಸಂಖ್ಯೆ 34,021. ಬಿಬಿಎಂಪಿ ಪೌರ ಕಾರ್ಮಿಕರಿಗೆ ರ‍್ಯಾಂಡಮ್ ಟೆಸ್ಟ್ ಮಾಡುತ್ತಿದೆ.

English summary
In a rapid antigen test 37 pourakarmikas of Bengaluru Rayapura ward tested positive for COVID 19. All shifted to COVID Care Centre at BIEC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X