Get Updates
Get notified of breaking news, exclusive insights, and must-see stories!

KSRTC: ನಾಳೆ ಬಸ್ ಸಂಚಾರ ವ್ಯತ್ಯಾಸ: 38 ತಿಂಗಳ ವೇತನ ಬಾಕಿ: ಫೆ.19–20ಕ್ಕೆ ಕೆಎಸ್‌ಆರ್‌ಟಿಸಿ ಸೇರಿ ಸಾರಿಗೆ ನೌಕರರ ಮುಷ್ಕರ

38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆಬ್ರವರಿ 19 ಹಾಗೂ 20ರಂದು ಕರ್ನಾಟಕದಾದ್ಯಂತ ಮುಷ್ಕರ ನಡೆಸುವುದಕ್ಕೆ ಮುಂದಾಗಿದ್ದಾರೆ. ಇದರಿಂದ ಕರ್ನಾಟಕದಲ್ಲಿ ನಾಳೆ ಬಸ್ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ವೇತನ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ.

38 ತಿಂಗಳ ಹಿಂಬಾಕಿ ಹಣ ನೀಡಬೇಕು. 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಮತ್ತೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಬೆಂಗಳೂರು ಚಲೋ ನಡೆಸಲು ನಿರ್ಧರಿಸಲಾಗಿದೆ. ಫೆಬ್ರವರಿ 19ರಂದು ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೊ ನಡೆಸುವುದಕ್ಕೆ ನಿರ್ಧರಿಸಿದ್ದಾರೆ. ಇನ್ನು ಫೆಬ್ರವರಿ 20ರಿಂದ ಕೆಎಸ್‌ಆರ್‌ಟಿಸಿಯ 4 ನಿಗಮದ ನೌಕರರು ಪ್ರತಿಭಟನೆ ಮಾಡಲಿದ್ದಾರೆ. ಇನ್ನು ನಾಲ್ಕು ನಿಗಮಗಳ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಥವಾ ಸರ್ಕಾರ ಹಾಗೂ ನೌಕರರ ನಡುವೆ ಮಾತುಕತೆ ನಡೆಯದೆ ಇದ್ದರೆ ಮುಷ್ಕರವಾಗುವ ಸಾಧ್ಯತೆ ಇದೆ. ಇದರಿಂದ ಬಸ್‌ಗಳ ಸಂಚಾರದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ.

bmtc

ಇನ್ನು ಸಾರಿಗೆ ನೌಕರರ ಮುಖಂಡರಾದ ಅನಂತ್ ಸುಬ್ಬರಾವ್ ಅವರ ನಿಧನದ ಹಿನ್ನೆಲೆ ಕಳೆದ ಬಾರಿ ಬೆಂಗಳೂರು ಚಲೊ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಹೇಳಿದೆ. ಈ ಬಾರಿ ಭಾರೀ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ಕರ್ನಾಟಕ ಸರ್ಕಾರವು ವಿಫಲವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.

ಸಾರಿಗೆ ನೌಕರರ 4 ಪ್ರಮುಖ ಬೇಡಿಕೆಗಳು ಏನು

ಇನ್ನು ಸಾರಿಗೆ ನೌಕರರು ಹಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದೆ ಇರಿಸಿದ್ದಾರೆ. ಇದರಲ್ಲಿ ಮುಖ್ಯವಾಗಿ 38 ತಿಂಗಳ ಹಿಂಬಾಕಿ ಹಣ ನೀಡಬೇಕು, ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು, ಕಾರ್ಮಿಕರ ಕಿರುಕುಳ ನಿಲ್ಲಬೇಕು ಹಾಗೂ 1-1-2024 ರಿಂದ ವೇತನ ಜಾರಿಗೊಳಿಸಬೇಕು ಎನ್ನುವ ಬೇಡಿಕೆಗಳು ಪ್ರಮುಖವಾಗಿವೆ.

ಸಾರಿಗೆ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಆರೋಪ

ಇನ್ನು ಸಾರಿಗೆ ನೌಕರರ ಬೇಡಿಕೆಗೆ ಕರ್ನಾಟಕ ಸರ್ಕಾರವು ಸ್ಪಂದಿಸುತ್ತಿಲ್ಲ ಎನ್ನುವುದು ಸಾರಿಗೆ ನೌಕರರ ಆರೋಪವಾಗಿದೆ. 2025ರ ಆಗಸ್ಟ್‌ ತಿಂಗಳಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದರು. ಆದರೆ, ಸರ್ಕಾರ ಮಧ್ಯಪ್ರವೇಶ ಮಾಡಿ ಭರವಸೆ ನೀಡಿದ್ದ ಕಾರಣಕ್ಕಾಗಿ, ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶದ ಮೇರೆಗೆ ಅಂದು ಸಾರಿಗೆ ನೌಕರರು ಮುಷ್ಕರ ಮುಂದೂಡಿದ್ದರು. 38 ತಿಂಗಳ ಹಿಂಬಾಕಿ ಸಿಗುಲಿದೆ ಎನ್ನುವ ಭರವಸೆ ಸಾರಿಗೆ ನೌಕರರಲ್ಲಿತ್ತು. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಭರವಸೆಯನ್ನು ಈಡೇರಿಸದೆ ಇರುವುದರಿಂದ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ.

ಸಾರಿಗೆ ನಿಗಮಗಳ ನೌಕರರಿಂದ ಫೆಬ್ರವರಿ 19ಕ್ಕೆ ಬೆಂಗಳೂರು ಚಲೊ ನಡೆಸಲು

ಇನ್ನು ಸಾರಿಗೆ ನಿಗಮಗಳ ನೌಕರರು ಫೆಬ್ರವರಿ 19ಕ್ಕೆ ಬೆಂಗಳೂರು ಚಲೊಗೆ ಕರೆ ನೀಡಿದ್ದಾರೆ. ಕೆಎಸ್‌ಆರ್‌ಟಿಸಿ ಸೇರಿದಂತೆ 4 ನಿಗಮಗಳ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೊ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಫೆಬ್ರವರಿ 19ರಂದು ಬೆಳಿಗ್ಗೆ 11 ಗಂಟೆಯಿಂದ ಶಾಂತಿಯುತ ಪ್ರತಿಭಟನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+