ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಪ್ಪನ ಅಗ್ರಹಾರ ಜೈಲಿನಲ್ಲಿ 38 ಶ್ರೀಲಂಕಾ ಪ್ರಜೆಗಳ ಅಕ್ರಮ ಬಂಧನ..!

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಅ.1. ಮಾನವ ಕಳ್ಳಸಾಗಾಣಿಕೆಯ ಸಂತ್ರಸ್ತರಾದ 38 ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಬಂಧಿಸಿಡಲಾಗಿದೆ.

ಇತ್ತೀಚೆಗೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾರಾಗೃಹಕ್ಕೆ ಭೇಟಿ ನೀಡಿದಾಗ ಈ ವಿಷಯ ತಿಳಿದು ಬಂದಿದೆ. ಹಾಗಾಗಿ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌. ಶಶಿಧರ್‌ ಶೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

 38 Srilankan citizens illegal detention at parappana Agrahara central jail

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಸರ್ಕಾರದ ಗೃಹ ಸಚಿವಾಲಯ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ರಾಜ್ಯದ ಗೃಹ ಇಲಾಖೆ, ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ಆದರೆ, ಇತೀಚಿಗೆ ಬೆಂಗಳೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸೆಂಟ್ರಲ್‌ ಜೈಲಿಗೆ ಭೇಟಿ ಕೊಟ್ಟಾಗ ಎಫ್‌ಐಆರ್‌ ದಾಖಲಿಸಿದ 25 ಮಂದಿ ಸೇರಿದಂತೆ 38 ಶ್ರೀಲಂಕಾ ಪ್ರಜೆಗಳನ್ನು ಯಾವುದೇ ಅಪರಾಧ ಮಾಡದೆ ಅಕ್ರಮವಾಗಿ ಜೈಲಿನಲ್ಲಿಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.

38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಜೈಲಿನಲ್ಲಿಟ್ಟಿರುವುದು ಕಾನೂನು ಬಾಹಿರವಾಗಿದ್ದು, ವಿಶೇಷ ಕೋರ್ಟ್‌ನ ಆದೇಶ ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ತಕ್ಷಣ ಅವರನ್ನು ಜೈಲಿನಿಂದ ಡಿಟೆನ್ಷನ್‌ ಸೆಂಟರ್‌ಗೆ ಸ್ಥಳಾಂತರ ಮಾಡಲು ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಡಿಟೆಂಟನ್ಷನ್ ಕೇಂದ್ರ ಆರಂಭ:

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ತನಕ ಅವರನ್ನು ಇರಿಸಲು ರಾಜ್ಯದಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಹೊಂದಿದ ಡಿಟೆನ್ಷನ್‌ ಸೆಂಟರ್‌ಗಳನ್ನು ಸ್ಥಾಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಹೈಕೋರ್ಟ್‌ ನಿಗದಿಪಡಿಸಿದ ಕಾಲಮಿತಿಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಎನ್‌ಐಎ ವಿಶೇಷ ಕೋರ್ಟ್‌ 2021ರ ಅ.30ರಂದು ನೀಡಿರುವ ಆದೇಶದ ಪ್ರಕಾರ ಬೆಂಗಳೂರಿನಲ್ಲಿ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು. 38 ಮಂದಿ ಶ್ರೀಲಂಕಾ ಪ್ರಜೆಗಳ ಹೇಳಿಕೆಯನ್ನು ತ್ವರಿತವಾಗಿ ದಾಖಲಿಸುವಂತೆ ಎನ್‌ಐಎ ವಿಶೇಷ ಕೋರ್ಟ್‌ಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಲಾಗಿದೆ.

ಮಾನವ ಕಳ್ಳ ಸಾಗಾಣೆ:

ಮಂಗಳೂರು ನಗರದ 'ಸೀಪೋರ್ಟ್‌ ಗೆಸ್ಟ್‌ ಹೌಸ್‌'ನಲ್ಲಿ25 ಶ್ರೀಲಂಕಾ ಪ್ರಜೆಗಳು ಪಾಸ್‌ಪೋರ್ಟ್‌ ಹಾಗೂ ಇನ್ನಿತರೆ ಯಾವುದೇ ದಾಖಲೆಗಳಲ್ಲಿದೆ ಅನೇಕ ದಿನಗಳಿಂದ ವಾಸವಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸರು 2021ರ ಜೂ.10ರಂದು ಈ 25 ಮಂದಿ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು, ಪಾಸ್‌ಪೋರ್ಟ್‌ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರು. ಅವರೆಲ್ಲರೂ ಅಕ್ರಮವಾಗಿ ಭಾರತಕ್ಕೆ ನುಸಳಿದವರಲ್ಲ. ಕೆನಡಾದಲ್ಲಿಉದ್ಯೋಗ ಕೊಡಿಸುವುದಾಗಿ ಹೇಳಿ ಏಜೆನ್ಸಿಯೊಂದು ಇವರನ್ನು ಕಳ್ಳಸಾಗಾಣಿಕೆ ಮಾಡಲು ಪ್ರಯತ್ನಿಸಿತ್ತು. ಪ್ರಕರಣ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಎಫ್‌ಐಆರ್‌ ದಾಖಲಾದ ಶ್ರೀಲಂಕಾ ಪ್ರಜೆಗಳ ಹೆಸರನ್ನು ಆರೋಪ ಪಟ್ಟಿಯಿಂದ ಕೈಬಿಡುವಂತೆ ವಿಶೇಷ ಕೋರ್ಟ್‌ ಅವರನ್ನು ಸೆಂಟ್ರಲ್‌ ಜೈಲಿನಿಂದ ಡಿಟೆನ್ಷನ್‌ ಸೆಂಟರ್‌ಗೆ ಸ್ಥಳಾಂತರಿಸುವಂತೆ 2021ರ ಅ.30ರಂದು ಆದೇಶಿಸಿದೆ.

Recommended Video

Team India ಆಟಗಾರರು ಅರ್ಶದೀಪ್ ಜೆರ್ಸಿ ತೊಡಲು ಇದೇ ಕಾರಣ | *Cricket | OneIndia Kannada

English summary
38 Srilankan citizens illegal detention at parappana Agrahara central jail: HC ordered notice to union and state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X