ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಮಂಡ್ಯದ ರೈತ

ಬೆಂಗಳೂರು, ಫೆಬ್ರವರಿ 24 : ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ರೈತರೊಬ್ಬರು ಅಂಗಾಂಗ ದಾನ ಮಾಡಿ ಹಲವು ಜೀವಗಳನ್ನು ಉಳಿಸಿದ್ದಾರೆ. ಕುಟುಂಬದ ಒಪ್ಪಿಗೆಯ ಬಳಿಕ ಅಂಗಾಂಗಳನ್ನು ದಾನ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ತಟ್ಟಹಳ್ಳಿ ಗ್ರಾಮದ ರೈತ ರಾಜು (39) ಅಂಗಾಂಗಳನ್ನು ದಾನ ಮಾಡಿದವರು. ದೀರ್ಘ ಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 12 ವರ್ಷದ ಬಾಲಕಿಗೆ ಎಡಭಾಗದ ಮೂತ್ರಪಿಂಡ ದಾನ ಮಾಡಿ ಜೀವ ಉಳಿಸಿದ್ದಾರೆ.

ಬಲಭಾಗದ ಮೂತ್ರಪಿಂಡ, ಯಕೃತ್, ಶ್ವಾಸಕೋಶ, ಹೃದಯ ಕವಾಟ, ಕಾರ್ನಿಯಾಗಳನ್ನು ವಿವಿಧ ಆಸ್ಪತ್ರೆಗಳ ರೋಗಿಗಳಿಗೆ ದಾನ ಮಾಡಿ ಆರು ಜನರ ಜೀವವನ್ನು ಉಳಿಸಿದ್ದಾರೆ.

mandya

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 'ಜೀವ ಸಾರ್ಥಕತೆ' ಸಹಯೋಗದಲ್ಲಿ ಶುಕ್ರವಾರ ಅಂಗಾಂಗದಾನ ಮತ್ತು ಕಸಿ ಯಶ್ವಸ್ವಿಯಾಗಿದೆ. ರೈತನ ಕುಟುಂಬದವರ ಒಪ್ಪಿಗೆ ಪಡೆದು, ಅಂಗಾಂಗಗಳನ್ನು ದಾನ ಮಾಡಲಾಗಿದೆ.

ರಾಜು ಅವರು ಫೆ.17ರಂದು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಯಶವಂತಪುರದ ಸ್ಪರ್ಶ್ ಸೂಪರ್ ಸೆಷ್ಪಾಲಿಟಿ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಣೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+