ಬೆಂಗಳೂರಿನ ಈ ಯೋಜನೆಗೆ ಭೂಮಿ ಕೊಟ್ಟರೆ 3 ಪಟ್ಟು ಪರಿಹಾರ: ಆಸ್ತಿದಾರರಿಗೆ ಡಿಕೆಶಿ ಗುಡ್‌ನ್ಯೂಸ್!

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಅಲ್ಲದೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಮೇಲೆ ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆ ಸೇರಿದಂತೆ ವಿವಿಧ ವಿಚಾರದಲ್ಲಿ ಈಗಾಗಲೇ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಇದೀಗ ಪ್ರಮುಖ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆಸ್ತಿದಾರರಿಗೆ ಬಂಪರ್ ಅಪ್ಡೇಟ್ಸ್‌ ನೀಡಲಾಗಿದೆ.

ಬೆಂಗಳೂರಿನ ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಅವರು ಮಹತ್ವದ ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಬೆಂಗಳೂರಿನ ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಭೂಮಿ ಕಳೆದುಕೊಂಡ ಅಥವಾ ಭೂಮಿ ನೀಡಿರುವ ರೈತರಿಗೆ ಮೂರು ಪಟ್ಟು ಪರಿಹಾರ ಕೊಡುವುದಾಗಿ ಅವರು ಘೋಷಿಸಿದ್ದಾರೆ.

3X Compensation for Land Owners in Bengaluru Business Corridor DK Shivakumar s Big Promise

ಸಚಿವ ಸಂಪುಟ ಸಭೆಯಲ್ಲಿ 117 ಕಿಮೀ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಬಿಡಿಎ ಕಾಯ ಪ್ರಕಾರ ದುಪ್ಪಟ್ಟು ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ನಮ್ಮ ಸರ್ಕಾರ ರೈತರಿಗೆ ಮೂರು ಪಟ್ಟು ಪರಿಹಾರ, ಟಿಡಿಆರ್ ಅಥವಾ ಎಫ್‌ಎಆರ್ ನೀಡಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೇ ಈ ಹಿಂದಿನ ಯಾವ ಸರ್ಕಾರವೂ ಈ ವಿಚಾರದಲ್ಲಿ ಧೈರ್ಯ ತೋರಿಸಿರಲಿಲ್ಲ. 2007 - 2008ರಲ್ಲಿ ತೀರ್ಮಾನವಾಗಿದ್ದರೂ ಅನುಷ್ಠಾನ ಸಾಧ್ಯವಾಗಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ: ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಸ್ತಿದಾರರಿಗೆ / ಭೂಮಿ ಕೊಟ್ಟವರಿಗೆ ಮೂರು ಪಟ್ಟು ಪರಿಹಾರ ನೀಡುವುದಾಗಿ ಹೇಳಿದ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರುಪಟ್ಟು ಪರಿಹಾರ ನೀಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿರುವುದು ಹಲವರಲ್ಲಿ ಸಂತೋಷವನ್ನುಂಟು ಮಾಡಿದೆ. ಆದರೆ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ದರ ಎಕರೆಗೆ 20 ಲಕ್ಷ × 3 ಪಟ್ಟು = 60 ಲಕ್ಷ. ಅದೇ ಜಮೀನು ಮಾರುಕಟ್ಟೆ ದರ ಎಕರೆಗೆ ಅಂದಾಜು 80 ಲಕ್ಷ. ಯಾವುದು ಲಾಭ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆ ಅಪ್ಡೇಟ್ಸ್‌: ಇನ್ನು ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್‌-1) ಅಥವಾ ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ಗೆ ಹೊಸ ವಿನ್ಯಾಸ ನೀಡಲಾಗಿದೆ.

ಇದಕ್ಕೂ ಮೊದಲು 100 ಮೀಟರ್ ಅಗಲದ ರಸ್ತೆ ಯೋಜನೆ ರೂಪಿಸಲಾಗಿತ್ತು. ಇದೀಗ 65 ಮೀಟರ್‌ಗೆ ಕಾರಿಡಾರ್ ಸೀಮಿತ ಮಾಡಿ ಮೆಟ್ರೋ ರೈಲು ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+