ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿರಾಟ್ ಕೊಹ್ಲಿ ಸೆಲ್ಫಿಗಾಗಿ ಕ್ರೀಡಾಂಗಣಕ್ಕೆ ಅಕ್ರಮ ಪ್ರವೇಶ ಮಾಡಿದ ನಾಲ್ವರು ಅರೆಸ್ಟ್ !

|
Google Oneindia Kannada News

ಬೆಂಗಳೂರು, ಮಾ. 14: ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಜತೆ ಸೆಲ್ಫಿ ತೆಗೆಸಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ನಿಷೇಧಿತ ಪ್ರದೇಶಕ್ಕೆ ತೆರಳಿದ ನಾಲ್ವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ 18 ವರ್ಷದೊಳಗಿನ ಬಾಲಕರು. ಮತ್ತಿಬ್ಬರು ಅರೋಪಿಗಳು ಸೇರಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ತಿಳಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಭಾನುವಾರ ಸಂಜೆ ಪಿಂಕ್ ಬಾಲ್ ಕ್ರಿಕೆಟ್ ಟೆಸ್ಟ್ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು. ಭಾನುವಾರ ರಾತ್ರಿ 7. 30 ರ ಸುಮಾರಿನಲ್ಲಿ ಕ್ರಿಕೆಟರ್ ಗಳಿಗೆ ಮೆಡಿಕಲ್ ವಿಶ್ರಾಂತಿ ನೀಡಲಾಗಿತ್ತು. ಈ ವೇಳೆ ವಿರಾಟ್ ಕೊಹ್ಲಿ ಮತ್ತಿತರರ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದರು. ವಿರಾಟ್ ಕೊಹ್ಲಿ ಬಳಿ ಸೆಲ್ಫಿ ಪಡೆಯಲು ಇಬ್ಬರು ಬಾಲಕರು ಸೇರಿ ನಾಲ್ವರು ನಿಷೇಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ. ಈ ವೇಳೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

Bengaluru: 4 Arrested for Entering to Restricted Area in Chinnaswamy Stadium to Take Selfie With Viral Kohli

ಬಂಧಿತ ಆರೋಪಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ನಡೆಸಿದಾಗ ತಮ್ಮ ನೆಚ್ಚಿನ ಆಟಗಾರ ವಿರಾಟ್ ಕೊಯ್ಲಿ ಸೆಲ್ಫಿ ಪಡೆಯಲು ತೆರಳಿದ್ದಾಗಿ ತಿಳಿಸಿದ್ದಾರೆ. ಕಾನೂನುಸ ಸಂಘರ್ಷಕ್ಕೆ ಒಳಗಾದ ಇಬ್ಬರನ್ನು ಬಾಲ ಮಂದಿರಕ್ಕೆ ಒಪ್ಪಿಸಲಾಗಿದ್ದು, ಮತ್ತಿಬ್ಬರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Recommended Video

RCB ಸೇರಿದ ಕೂಡಲೇ ಕನ್ನಡದಲ್ಲಿ ಮಾತನಾಡಿದ Faf Du plessis | Oneindia Kannada

English summary
Bengaluru Cubbon Park Police arrested 4 Youths for entering to restricted area in M Chinnaswamy Stadium to take selfie with Viral Kohli during India vs Sri Lanka Pink Ball Test. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X