ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ಳಂದೂರು ಕೆರೆಗೆ ಬೆಂಕಿ ಇಟ್ಟ 4 ಕಿಡಿಗೇಡಿಗಳ ಬಂಧನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 7: ಬೆಳ್ಳಂದೂರು ಕೆರೆಯಲ್ಲಿ ಪದೇ ಪದೇ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರು ಹಾಗೂ ಬಿಬಿಎಂಪಿಯನ್ನು ಚಿಂತೆಗೀಡು ಮಾಡಿತ್ತು. ಆದರೆ ಕಲುಷಿತ ನೀರು ಮಾತ್ರವಲ್ಲ ಮನುಷ್ಯರ ಕೈವಾಡವೂ ಇದೆ ಎನ್ನುವುದು ಇದೀಗ ಬೆಳಕಿಗೆ ಬಂದಿದೆ.

ಬೆಳ್ಳಂದೂರು ಕೆರೆಯಲ್ಲಿ ಕೇಬಲ್ ಗಳನ್ನು ಬೆಂಕಿಯಲ್ಲಿ ಸುಟ್ಟು ತಾಮ್ರದ ತಂತಿಗಳನ್ನು ಸಂಗ್ರಹಿಸುತ್ತಿದ್ದ ತಮಿಳುನಾಡು ಮೂಲದ ನಾಲ್ವರನ್ನು ಬಿಬಿಎಂಪಿಯಿಂದ ನೇಮಿಸಲ್ಪಟ್ಟಿರುವ ಮಾರ್ಷಲ್‌ಗಳು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ರಾಜ್ಯಕ್ಕೆ ಎನ್‌ಜಿಟಿ ಎದುರು ಭಾರಿ ಮುಖಭಂಗ: 75 ಕೋಟಿ ದಂಡ ರಾಜ್ಯಕ್ಕೆ ಎನ್‌ಜಿಟಿ ಎದುರು ಭಾರಿ ಮುಖಭಂಗ: 75 ಕೋಟಿ ದಂಡ

ಬೆಳ್ಳಂದೂರು ಕೆರೆಯಲ್ಲಿ ಪದೇ ಪದೇ ಅಗ್ನಿ ಅನಾಹುತಗಳು ಸಂಭಿವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆರೆಯ ಕಾವಲಿಗೆ ಪಾಲಿಕೆಯು ಮಾರ್ಷಲ್‌ಗಳನ್ನು ನಿಯೋಜಿಸಿದೆ. ಇವರು ಹಗಲು ರಾತ್ರಿಯೆನ್ನದೆ, ಕೆರೆ ಸುತ್ತಲೂ ಗಸ್ತು ತಿರುಗುತ್ತಿದ್ದು, ಅಕ್ರಮ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

4 nabbed for setting fire at Bellandur lake

ಮಾರ್ಷಲ್‌ಗಳು ಗಸ್ತು ತಿರುಗುತ್ತಿದ್ದ ವೇಳೆ ಎಚ್‌ಎಎಲ್‌ ಲೇಔಟ್ ಭಾಗದಲ್ಲಿ ಬೆಂಕಿ ಉರಿಯುತ್ತಿರುವುದು ಕಣ್ಣಿಗೆ ಬಿದ್ದಿದೆ. ತಕ್ಷಣ ಬೆಂಕಿ ನಂದಿಸಲು ಸ್ಥಳಕ್ಕೆ ಹೋದಾಗ ತಮಿಳುನಾಡು ಮೂಲದ ಪಾಂಡುರಂಗನ್ ಮತ್ತು ಆತನ ಮೂವರು ಸಹಚರರು ಕೇಬಲ್‌ಗಳನ್ನು ಸುಟ್ಟು ತಾಮ್ರದ ತಂತಿಗಳನ್ನು ಹೊರ ತೆಗೆಯುತ್ತಿದ್ದರು. ಅವರನ್ನು ಬಂಧಿಸಲಾಗಿದೆ.

ಸೆಪ್ಟಿಕ್ ಟ್ಯಾಂಕ್‌ನಂತೆ ಬೆಳ್ಳಂದೂರು ಕೆರೆ ಬಳಕೆ: ಆಯೋಗ ವರದಿ ಸೆಪ್ಟಿಕ್ ಟ್ಯಾಂಕ್‌ನಂತೆ ಬೆಳ್ಳಂದೂರು ಕೆರೆ ಬಳಕೆ: ಆಯೋಗ ವರದಿ

ಈಗಾಗಲೇ ಬೆಳ್ಳಂದೂರು ಕೆರೆ ಮಾಲಿನ್ಯ ಕುರಿತು ಹಸಿರು ನ್ಯಾಯಾಧೀಕರಣ ರಾಜ್ಯ ಸರ್ಕಾರಕ್ಕೆ 50 ಕೋಟಿ ಹಾಗೂ ಬಿಬಿಎಂಪಿಗೆ 25ಕೋಟಿ ಸೇರಿ 75 ಕೋಟಿ ದಂಡ ವಿಧಿಸಿದೆ.

English summary
Looks like the local civic body need no longer blush over the regular fires erupting at Bellandur lake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X