ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 4 ಕೊರೊನಾ ಪ್ರಕರಣಗಳು ದೃಢ: ಹೆಚ್ಚಿದ ಆತಂಕ

|
Google Oneindia Kannada News

ಬೆಂಗಳೂರು, ಮಾರ್ಚ್ 10: ಬೆಂಗಳೂರಲ್ಲಿ ಮತ್ತೆ ಮೂರು ಕೊರೊನಾ ಪ್ರಕರಣ ದೃಢಪಟ್ಟಿದೆ. ನಿನ್ನೆಯಷ್ಟೇ ಓರ್ವ ಟೆಕ್ಕಿ ಕೊರೊನಾಗೆ ತುತ್ತಾಗಿರುವುದು ತಿಳಿದುಬಂದಿತ್ತು. ಇದೀಗ ಮತ್ತೆ ಮೂರು ಪ್ರಕರಣಗಳು ದೃಡಪಟ್ಟಿವೆ.

Recommended Video

Karnataka Government Declared Holiday For primary (5th standard) Students | School Holiday

ಟೆಕ್ಕಿ ಕುಟುಂಬದ ಉಳಿದವರಿಗೂ ಸೋಂಕು ತಗುಲಿದೆ. ಟೆಕ್ಕಿ ಪತ್ನಿ, ಮಗಳು, ಹಾಗೂ ಸಹೋದ್ಯೋಗಿಗೆ ಕೊರೊನಾ ಸೋಂಕು ತಗುಲಿದೆ.

ಕರ್ನಾಟಕದಲ್ಲಿ ಮೊದಲ ಕೊರೊನಾವೈರಸ್ ಕೇಸ್ ಪತ್ತೆಕರ್ನಾಟಕದಲ್ಲಿ ಮೊದಲ ಕೊರೊನಾವೈರಸ್ ಕೇಸ್ ಪತ್ತೆ

ಸುಮಾರು 40 ವರ್ಷ ವಯಸ್ಸಿನ ಟೆಕ್ಕಿ ಅಮೆರಿಕದಿಂದ ಮಾರ್ಚ್ 1ರಂದು ಬೆಳಿಗ್ಗೆ 8.45ಕ್ಕೆ ಬೆಂಗಳೂರಿಗೆ ಬಂದಿದ್ದಾರೆ.

ಭಾರತದಲ್ಲಿ ಕೊರೊನಾ ಪೀಡಿತ ದಂಪತಿ ಮೇಲೆ anti-HIV ಡ್ರಗ್ಸ್ ಪ್ರಯೋಗಭಾರತದಲ್ಲಿ ಕೊರೊನಾ ಪೀಡಿತ ದಂಪತಿ ಮೇಲೆ anti-HIV ಡ್ರಗ್ಸ್ ಪ್ರಯೋಗ

ಸೋಂಕಿತ ವ್ಯಕ್ತಿ, ಪತ್ನಿ ಮತ್ತು ಒಂದು ಮಗು ಜೊತೆ ಡ್ರೈವರ್ ಎಲ್ಲರನ್ನೂ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಅವರು ಪ್ರಯಾಣ ಬೆಳೆಸಿದ ವಿಮಾನದಲ್ಲಿ ಅವರ ಅಕ್ಕಪಕ್ಕ ಕುಳಿತಿದ್ದ ವ್ಯಕ್ತಿಗಳ ಬಗ್ಗೆಯೂ ಗಮನ ಹರಿಸುತ್ತಿದ್ದೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

ಅಮೆರಿಕದಿಂದ ಬೆಂಗಳೂರಿಗೆ ಬಂದ ಕೊರೊನಾ

ಅಮೆರಿಕದಿಂದ ಬೆಂಗಳೂರಿಗೆ ಬಂದ ಕೊರೊನಾ

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕುಟುಂಬವನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೆರಿಕದಿಂದ ಬಂದಿದ್ದ ಸಾಫ್ಟ್‍ವೇರ್ ಇಂಜಿನಿಯರ್‍ಗೆ ಕೊರೊನ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಾರ್ಚ್ 1 ರಂದು ಟೆಕ್ಕಿ ಅಮೆರಿಕದಿಂದ ಬಂದಿದ್ದರು.

ಕೊರೊನಾ ಪೀಡಿತರ ಕುಟುಂಬದವರು ಆಸ್ಪತ್ರೆಗೆ ದಾಖಲು

ಕೊರೊನಾ ಪೀಡಿತರ ಕುಟುಂಬದವರು ಆಸ್ಪತ್ರೆಗೆ ದಾಖಲು

ಕೊರೊನಾ ಪೀಡಿತ ವ್ಯಕ್ತಿ, ಅವರ ಪತ್ನಿ, ಮಗಳು ಹಾಗೂ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಮಾರ್ಚ್ 1 ರಂದು ಟೆಕ್ಕಿ ಪ್ರಯಾಣ ಮಾಡಿದ ವಿಮಾನದ ಸಹ ಪ್ರಯಾಣಿಕರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕರ್ನಾಟಕ ಮೂಲದ ವ್ಯಕ್ತಿ ಅಮೆರಿಕಾದಿಂದ ಬಂದಿದ್ದಾರೆ ಎಂದು ಸುಧಾಕರ್ ಮಾಹಿತಿ ನೀಡಿದರು.

ಇದುವರೆಗೆ ನಾಲ್ಕು ವ್ಯಕ್ತಿಗಳಲ್ಲಿ ಕೊರೊನಾ ಸೋಂಕು

ಇದುವರೆಗೆ ನಾಲ್ಕು ವ್ಯಕ್ತಿಗಳಲ್ಲಿ ಕೊರೊನಾ ಸೋಂಕು

ಕರ್ನಾಟಕದಲ್ಲಿ ಇದುವರೆಗೆ ನಾಲ್ಕು ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗ್ರತಾ ಕ್ಮರ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಶ್ರೀರಾಮುಲು ತಿಳಿಸಿದ್ದಾರೆ.

ರಾಜ್ಯದ ಕೊರೊನಾ ಪ್ರಕರಣಗಳ ಬಗ್ಗೆ ಯಡಿಯೂರಪ್ಪ ಮಾಹಿತಿ

ರಾಜ್ಯದ ಕೊರೊನಾ ಪ್ರಕರಣಗಳ ಬಗ್ಗೆ ಯಡಿಯೂರಪ್ಪ ಮಾಹಿತಿ

ರಾಜ್ಯದಲ್ಲಿ ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ. ಕೊರೊನಾ ತಡೆಗಟ್ಟುವಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಾಗಿ ಬಿಎಸ್‌ವೈ ಮಾಹಿತಿ ಸಂಗ್ರಹ ಮಾಡಿದರು. ಹಿರಿಯ ಅಧಿಕಾರಿಗಳ ಜೊತೆಗೆ ಫೋನ್‌ನಲ್ಲಿ ಮಾತುಕತೆ ನಡೆಸಿದ ಬಿಎಸ್‌ವೈ ಪ್ರತಿಯೊಂದ ವಿವರಗಳನ್ನು ಕಲೆಹಾಕಿದ್ದಾರೆ.

ಈ ವೇಳೆ ಅಧಿಕಾರಿಗಳಿಗೆ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ ನೆರವುಗಳನ್ನು ನೀಡಲು ಸಿದ್ದ ಎಂದಿದ್ದಾರೆ.

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಐಟಿ ಬಿಟಿ ಕಂಪನಿಗಳು ಇರುವ ಕಡೆಗಳಲ್ಲಿ ಹೆಚ್ಚಿನ ಗಮನ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಮಾಹಿತಿಯನ್ನು ಪಡೆದುಕೊಂಡರು.

English summary
4 people From Bengaluru tested positive for novel coronavirus infection on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X