• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು; ನಾಲ್ವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ನಾಪತ್ತೆ

|

ಬೆಂಗಳೂರು, ಡಿಸೆಂಬರ್ 26 : ನಾಲ್ವರು ಎಸ್ ವಿದ್ಯಾರ್ಥಿಗಳು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ಹುಡುಕಾಟ ನಡೆದಿದೆ.

ತರುಣ್ (16), ಸೃಜನ್ (16), ಗೋಕುಲ್ ಆದಿತ್ಯ (16) ಮತ್ತು ಸಿಂಹಾದ್ರಿ (17) ನಾಪತ್ತೆಯಾದ ವಿದ್ಯಾರ್ಥಿಗಳು. ಡಿಸೆಂಬರ್ 24ರಂದು ಎಲ್ಲಾ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

ಚಿತ್ರದುರ್ಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಾಪತ್ತೆ; ಚಿರತೆಗೆ ಬಲಿಯಾಗಿರುವ ಶಂಕೆ

ಎಲ್ಲರೂ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಸಿಂಗಸಂದ್ರದ ನಿವಾಸಿಗಳು. ವಿದ್ಯಾರ್ಥಿಗಳನ್ನು ಅಪಹರಣ ಮಾಡಲಾಗಿದೆಯೇ? ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.

ಎಸ್ಎಸ್ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳ ಪೋಷಕರು ಹುಡುಕಾಟ ನಡೆಸಿದ್ದು, ಯಾವುದೇ ಸುಳಿವು ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ: ಪೋಷಕರೇ ಎಚ್ಚರ

ಯುವಕನ ಹತ್ಯೆ : ಚಾಕುವಿನಿಂದ ಇರಿದು ಮಂಜುನಾಥ್ ಎಂಬ ಯುವಕನನ್ನು ಕೊಲೆ ಮಾಡಿರುವ ಘಟನೆ ಗುರುವಾರ ರಾತ್ರಿ ಶ್ರೀರಾಂಪುರ ಬಳಿ ನಡೆದಿದೆ. ನಾಲ್ವರು ದುಷ್ಕರ್ಮಿಗಳು ಎಲ್‌. ಎನ್. ಪುರ ಬಸ್ ನಿಲ್ದಾಣದ ಬಳಿ ಮಂಜುನಾಥ್ ಕೊಂದು ಪರಾರಿಯಾಗಿದ್ದಾರೆ.

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಶ್ರೀರಾಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

English summary
4 SSLC students missing from Bengaluru from December 24, 2019. Parents field the complaint in Parappana Agraharaa police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X