ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಮಾಡಿದ 'ರೋಮಿಯೊ'

ಬೆಂಗಳೂರು, ನವೆಂಬರ್. 18: ಬೆಂಗಳೂರಿನಲ್ಲಿ ಮತ್ತೆ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ನಾಲ್ಕೂವರೆ ವರ್ಷದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಮಣಿಪುರ ಮೂಲದ ರೋಮಿಯೊನನ್ನು (27) ಬಂಧಿತ ಶಿಕ್ಷಕ. ಪ್ರಜೆಯಾಗಿರುವ ಈತ, ನಾಲ್ಕು ವರ್ಷದ ಹಿಂದೆ ಬೆಂಗಳೂರಿಗೆ ಆಗಮಿಸಿ ಕೆಲಸ ಮಾಡುತ್ತಿದ್ದು ಕೋರಮಂಗಲ ಮತ್ತು ಈಜಿಪುರದಲ್ಲಿ ವಾಸವಾಗಿದ್ದ.[ದೇಶವನ್ನೇ ಅಲುಗಾಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳು]

rape

ಶಾಲೆ ಮುಗಿದ ಮೇಲೆ ಸಂಜೆ ಶಾಲೆಯಿಂದ ಮನೆಗೆ ಬಂದ ಬಾಲಕಿ ಖಿನ್ನತೆಗೆ ಒಳಗಾಗಿದ್ದಳು. ಅಲ್ಲದೆ, ದೇಹದ ಗುಪ್ತಾಂಗ ತೀವ್ರ ನೋಯುತ್ತಿರುವುದಾಗಿ ಪೋಷಕರಿಗೆ ಹೇಳಿದ್ದಳು. ಇದರಿಂದ ಆತಂಕಗೊಂಡ ಪಾಲಕರು ಆಸ್ಪತ್ರೆಗೆ ಕರೆದೊಯ್ದಾಗ ಅತ್ಯಾಚಾರ ನಡೆದ ಸಂಗತಿ ಬೆಳಕಿಗೆ ಬಂದಿದೆ. ಪಾಲಕರು ದೂರು ನೀಡಿದ ನಂತರ ರೋಮಿಯೋನನ್ನು ಬಂಧಿಸಲಾಯಿತು ಎಂದು ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ತಿಳಿಸಿದ್ದಾರೆ.[ವಿಬ್ ಗಯಾರ್ ಶಾಲೆಯಲ್ಲಿ ಅತ್ಯಾಚಾಋ ನಡೆದಿತ್ತು]

ಬಂಧಿತನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೊಕ್ಸೊ) ಮತ್ತು ಅತ್ಯಾಚಾರ (ಐಪಿಸಿ 376) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ರೋಮಿಯೊ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+