ನೆಲಮಂಗಲ: ಕಸಾಯಿಖಾನೆಗೆ ಸಾಗಿಸುತ್ತಿದ್ದ 40 ಜಾನುವಾರುಗಳ ರಕ್ಷಣೆ
ಬೆಂಗಳೂರು, ಮೇ 30 : ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 40 ಜಾನುವಾರಗಳನ್ನು ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಮಂಗಳವಾರ ನಗರದ ಹೊರವಲಯದ ನೆಲಮಂಗಲ ಬಳಿ ರಕ್ಷಣೆ ಮಾಡಿದ್ದಾರೆ.
ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಲಾರಿಯಲ್ಲಿ ಜಾನುವಾರುಗಳನ್ನು ತುಮಕೂರು ಮಾರ್ಗವಾಗಿ ಬೆಂಗಳೂರು ನಗರಕ್ಕೆ ಸಾಗಿಸುತ್ತಿದ್ದ ವೇಳೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಅದರಲ್ಲಿದ್ದ 40 ಜಾನುವಾರುಗಳನ್ನು ರಕ್ಷಿಸಿದ್ದಾರೆ. [ಬೀಫ್ ಫೆಸ್ಟಿವಲ್ ಗೆ ಅನುಮತಿ ನೀಡಿಲ್ಲ: ಬೆಂಗಳೂರು ಪೊಲೀಸ್]

ಇನ್ನೂ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದು, ಉಳಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications