ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಷ್ಯಾದಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ವಿದ್ಯಾರ್ಥಿಗಳು

|
Google Oneindia Kannada News

ಬೆಂಗಳೂರು, ಜೂನ್ 29: ರಷ್ಯಾದಲ್ಲಿ ಕರ್ನಾಟಕದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ತಮ್ಮನ್ನು ಆದಷ್ಟು ಬೇಗ ತಮ್ಮೂರಿಗೆ ಸೇರಿಸಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ರಾಯಚೂರು, ಚಿತ್ರದುರ್ಗ, ಗದಗ, ತುಮಕೂರು, ದಾವಣಗೆರೆ, ಯಾದಗಿರಿ, ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ರಷ್ಯಾಗೆ ತೆರಳಿದಿದ್ದರು. ಆದರೆ, ಕೊರೊನಾ ವೈರಸ್‌ ನಂತರ ಭಾರತಕ್ಕೆ ಮರಳುವ ನಿರ್ಧಾರ ಮಾಡಿದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ ಸಾಧ್ಯತೆಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ ಸಾಧ್ಯತೆ

ರಷ್ಯಾದ ಮಸ್ಕೋದಲ್ಲಿ ಆತಂಕದಲ್ಲಿ ವಿದ್ಯಾರ್ಥಿಗಳು ದಿನ ಕಳೆಯುತ್ತಿದ್ದಾರೆ. ಈ ಹಿಂದೆ ಸರ್ಕಾರ 'ವಂದೇ ಭಾರತ್ ಮಿಷನ್' ಯೋಜನೆಯಡಿ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಸೀಟುಗಳ ಕೊರತೆ ಉಂಟಾಗಿದ್ದು, ಅನೇಕ ವಿದ್ಯಾರ್ಥಿಗಳು ರಷ್ಯಾದಲ್ಲಿಯೇ ಉಳಿಯುವಂತಾಗಿದೆ.

40 Karnatka Medical Students Stranded In Russia

ಈ ಬಗ್ಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇಂದು ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ 41 ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ಇದ್ದ ವಿಮಾನಗಳು ದೆಹಲಿ, ಚೆನ್ನೈ ಮಾರ್ಗವಾಗಿ ಆಗಮಿಸಿದ್ದು, ನೇರವಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವಂತೆ ಅನುಕೂಲ ಕಲ್ಪಿಸಲು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

English summary
Karnatka medical students stranded in Russia. The students requesting the government to help them to came back.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X