Property: ಬೆಂಗಳೂರಲ್ಲಿ 400 ಕೋಟಿ ಯೋಜನೆ: ಈ ಭಾಗದಲ್ಲಿ ಭೂಮಿಗೆ ಭರ್ಜರಿ ಬೆಲೆ! ಟ್ರಾಫಿಕ್ ಕಂಟ್ರೋಲ್
Bengaluru Property: ಬೆಂಗಳೂರು ಅಭಿವೃದ್ಧಿಯ ವೇಗದಲ್ಲಿ ಇದೆ. ಇದೀಗ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸರಣಿ ಕಾಮಗಾರಿಗಳು ನಡೆಯುತ್ತಿವೆ. ಇದರಿಂದ ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ ಹಾಗೂ ಟ್ರಾಫಿಕ್ ಜಾಮ್ ಕಡಿಮೆ ಆಗುವುದಕ್ಕೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ. ಸ್ಮೈಲ್) 22 ಕಿ.ಮೀ ಉದ್ದದ ಹೊರ ವರ್ತುಲ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಮುಂದಾಗಿದೆ.
ಬೈಯಪ್ಪನಹಳ್ಳಿ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ನಡುವೆ ಮಾರ್ಗವಾಗಿ ಅಭಿವೃದ್ಧಿ ಆಗಲಿದ್ದು. ಈ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕಾಗಿ "ರಸ್ತೆ ಅಂತಾರರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಲಾಗಿದೆ. ಹೊರ ವರ್ತುಲ ರಸ್ತೆ ಹಾಗೂ ಮೆಟ್ರೋ ಸೇರಿದಂತೆ ವಿವಿಧ ಕಾಮಗಾರಿಗಳಿಂದಾಗಿ ಬೆಂಗಳೂರಿನ ಕೆಲವು ಭಾಗದಲ್ಲಿ ಭೂಮಿ ಬೆಲೆ ಗಗನಮುಖಿಯಾಗಿದೆ. ಬೆಂಗಳೂರಿನ ಯಾವ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಅಲ್ಲದೇ ಯಾವೆಲ್ಲಾ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಿವೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ.

ORR ಯೋಜನೆಗೆ ಬರೋಬ್ಬರಿ 400 ಕೋಟಿ ರೂ.: ಇನ್ನು ಬೆಂಗಳೂರಿನ ಪ್ರಮುಖ ಕಾಮಗಾರಿಗಳಲ್ಲಿ ಒಂದಾಗಿರುವ ORR (ಹೊರ ವರ್ತುಲ ರಸ್ತೆ) ಯೋಜನೆಗೆ ಬರೋಬ್ಬರಿ 400 ಕೋಟಿ ರೂಪಾಯಿಯನ್ನು ಮೀಸಲಿರಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಈಚೆಗೆ ಬಜೆಟ್‌ನಲ್ಲಿ ಹೊರ ವರ್ತುಲ ರಸ್ತೆಯ ಒಂದು ಭಾಗವನ್ನು ಅಭಿವೃದ್ಧಿಪಡಿಸಲು 400 ಕೋಟಿ ರೂ.ಗಳನ್ನು ಮೀಸಲಿರಿಸುವುದಾಗಿ ಹೇಳಿಕೊಂಡಿದೆ.
ಬೆಂಗಳೂರಿನ ಜಂಕ್ಷನ್‌ಗಳ ಅಭಿವೃದ್ಧಿಗೆ 100 ಕೋಟಿ ರೂ.: ಇನ್ನು ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿಗಾಗಿ ಬರೋಬ್ಬರಿ 100 ಕೋಟಿ ರೂಪಾಯಿಯನ್ನು ಮೀಸಲಿರಿಸಲಾಗಿದೆ. ಬಿಬಿಎಂಪಿಯು ನಗರದ 75 ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿ ಮಾಡುವುದಕ್ಕೆ ಮುಂದಾಗಿದೆ. ಇದೀಗ ಗ್ರೇಟರ್ ಬೆಂಗಳೂರು ಪರಿಕಲ್ಪನೆಯ ಅಡಿಯಲ್ಲಿ ಹೊಸ ಐದು ಪಾಲಿಕೆಗಳು ರಚನೆ ಆಗುತ್ತಿದ್ದು ಇದಕ್ಕೂ ಮುಂಚೆಯೇ ನಗರದ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಜಂಕ್ಷನ್‌ಗಳ ಅಭಿವೃದ್ಧಿಗಾಗಿ ಬರೋಬ್ಬರಿ 100 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ಇದನ್ನು ಒಟ್ಟು 15 ಪ್ಯಾಕೇಜ್‌ಗಳನ್ನಾಗಿ ವಿಭಜನೆ ಮಾಡಿಕೊಳ್ಳಲಾಗಿದೆ.
ಭೂಮಿ ಬೆಲೆ ಹೆಚ್ಚಳ: ಇನ್ನು ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿಯ ಬೆಲೆ ಹೆಚ್ಚಳವಾಗಿದೆ. ಇದಕ್ಕೆ ಮತ್ತೊಂದು ಕಾರಣ ಬೆಂಗಳೂರಿನಲ್ಲಿ ಹೊಸ ಪಾಲಿಕೆಗಳ ರಚನೆ ಹಾಗೂ ಹೊಸ ಪ್ರದೇಶಗಳ ಸೇರ್ಪಡೆಯೂ ಕಾರಣವಾಗಿದೆ. ಆದರೆ ಎಐನಿಂದ ಐಟಿ ವಲಯದಲ್ಲಿ ಉದ್ಯೋಗ ಕಡಿತವಾಗುತ್ತಿದ್ದು. ಐಟಿ ಹಬ್ ಅಥವಾ ಐಟಿ ಕಂಪನಿಗಳು ಹೆಚ್ಚಾಗಿರುವ ಕೆಲವು ಪ್ರದೇಶಗಳಲ್ಲಿ ಭೂಮಿ ಬೆಲೆ ಇಳಿಕೆಯೂ ಆಗುತ್ತಿದೆ ಎಂದು ಹೇಳಲಾಗಿದೆ.












Click it and Unblock the Notifications