ರಾಜ್ಯದಲ್ಲಿ ಐದು ವರ್ಷಗಳಲ್ಲಿ ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ಶೇ.41ರಷ್ಟು ಏರಿಕೆ!
ಬೆಂಗಳೂರು, ಏಪ್ರಿಲ್. 06: ರಾಜ್ಯದಲ್ಲಿ ಇತ್ತ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದರೇ ಅತ್ತ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ದೌರ್ಜನ್ಯ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿರುವ ವರದಿ ಬಹಿರಂಗವಾಗಿದೆ. ಕಳೆದ ಐದು ವರ್ಷಗಳಲ್ಲಿ ಈ ಸಮುದಾಯಗಳ ಮೇಲಿನ ದೌರ್ಜನ್ಯ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಇತರ ಕಾನೂನಿನ ಹೊರತಾಗಿಯೂ ಕಳೆದ ಐದು ವರ್ಷಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯ ಜನರ ವಿರುದ್ಧದ ದೌರ್ಜನ್ಯಗಳು ತೀವ್ರ ಏರಿಕೆ ಕಂಡಿವೆ. ಕರ್ನಾಟಕ ರಾಜ್ಯ ಪೊಲೀಸರ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ರಾಜ್ಯವು ಎಸ್‌ಸಿ ಮತ್ತು ಎಸ್‌ಟಿಗಳ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ 41% ಹೆಚ್ಚಳವಾಗಿದೆ.

2018 ರಲ್ಲಿ, ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ವಿರುದ್ಧದ ದೌರ್ಜನ್ಯದ 1,536 ಪ್ರಕರಣಗಳು ಮತ್ತು 2019 ರಲ್ಲಿ 1,585 ದಾಖಲಾಗಿದ್ದವು. ಇವುಗಳು ಮುಂದಿನ ಮೂರು ವರ್ಷಗಳಲ್ಲಿಯೂ ಮುಂದುವರೆದಿದೆ. ರಾಜ್ಯದಲ್ಲಿ 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿಯೂ 1,691 ಪ್ರಕರಣಗಳು, 2021 ರಲ್ಲಿ 1,744 ಮತ್ತು 2022 ರಲ್ಲಿ 2167 ಪ್ರಕರಣಗಳು ವರದಿಯಾಗಿವೆ.
2018 ರಲ್ಲಿ 1,536 ಪ್ರಕರಣಗಳ ಸಂಖ್ಯೆಯು 2022 ರಲ್ಲಿ 2,167 ಕ್ಕೆ ಏರಿಕೆಯಾಗಿದೆ. ಅಂದರೆ, ಎಸ್‌ಸಿ, ಎಸ್‌ಟಿ ಸಮುದಾಯದ ವಿರುದ್ಧದ ದೌರ್ಜನ್ಯದ ಪ್ರಕರಣಗಳ ಏರಿಕೆಯಲ್ಲಿ ಸುಮಾರು ಶೇಕಡಾ 41 ರಷ್ಟು ಹೆಚ್ಚಳವಾಗಿದೆ. ಈ ಪ್ರಕರಣಗಳ ಹೆಚ್ಚಾಗಲು ಹಲವು ಅಂಶಗಳು ಕಾರಣವಾಗಿದ್ದು, ಅದರಲ್ಲಿ ಅಂತಹ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಎಂಬುದು ಸೇರಿದೆ.
*ಫೆ.28ರ ವರೆಗೆ 28 ಅತ್ಯಾಚಾರ ಪ್ರಕರಣಗಳು*
ಶಿಕ್ಷಯ ಪ್ರಮಾಣ ಕಡಿಮೆಯಿರುವ ಕಾರಣದಿಂದಾಗಿ, ಅಪರಾಧಿಗಳು ಇದೇ ರೀತಿಯ ಅಪರಾಧಗಳನ್ನು ಮಾಡುತ್ತಲೇ ಇರುತ್ತಾರೆ ಎಂದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಾಜ್ಯ ಮಟ್ಟದ ಜಾಗೃತ ಮತ್ತು ಮೇಲ್ವಿಚಾರಣಾ ಸಮಿತಿಯ ಮಾಜಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಹೆಚ್ಚಿನ ಅಪರಾಧಗಳು ದಾಳಿ, ಕೊಲೆ ಯತ್ನ ಮತ್ತು ಗಲಭೆ, ಎಸ್‌ಸಿ, ಎಸ್‌ಟಿ ಮಹಿಳೆಯರ ಮೇಲೆ ಕೊಲೆ, ಅತ್ಯಾಚಾರ ಮತ್ತು ಕಿರುಕುಳ ಪ್ರಕರಣಗಳಿವೆ ಎಂದು ಮಾಜಿ ಸದಸ್ಯರು ಸೂಚಿಸಿದ್ದಾರೆ. ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ, 2018 ರಲ್ಲಿ 130 ಕೇಸ್‌ಗಳು ವರದಿಯಾಗಿದೆ. ಪ್ರಕರಣಗಳ ಸಂಖ್ಯೆ 2019 ರಲ್ಲಿ 210 ಕ್ಕೆ ಏರಿತ್ತು, 2020 ರಲ್ಲಿ 153 ಕ್ಕೆ ಇಳಿದಿದೆ ಮತ್ತು 2021 ರಲ್ಲಿ 188 ಮತ್ತು 2022 ರಲ್ಲಿ 222 ಕ್ಕೆ ಏರಿಕೆಯಾಗಿದೆ.
ಈ ವರ್ಷದ ಫೆಬ್ರವರಿ 28 ರವರೆಗೆ ರಾಜ್ಯದಲ್ಲಿ ಇಪ್ಪತ್ತೆಂಟು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಸದಸ್ಯರ ವಿರುದ್ಧ ಇತರ ದೌರ್ಜನ್ಯ ಪ್ರಕರಣಗಳು ಫೆಬ್ರವರಿ ಅಂತ್ಯದವರೆಗೆ 299 ರಷ್ಟಿದೆ ಎಂಬ ಮಾಹಿತಿಯನ್ನು ಕರ್ನಾಟಕ ರಾಜ್ಯ ಪೊಲೀಸರ ಅಂಕಿಅಂಶಗಳು ಬಹಿರಂಗಪಡಿಸಿವೆ.
ಇನ್ನು, ಇತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಲು ನಿರ್ಧರಿಸಿತ್ತು. ಎಸ್‌ಸಿ (ಎಡ) ಕ್ಕೆ ಶೇಕಡಾ 6, ಎಸ್‌ಸಿ (ಬಲಕ್ಕೆ) ಶೇಕಡಾ 5.5, "ಸ್ಪೃಶ್ಯರಿಗೆ" (ಬಂಜಾರ, ಭೋವಿ, ಕೊರ್ಮಾ ಮತ್ತು ಕೊರ್ಚಾ ಇತ್ಯಾದಿ) ಶೇಕಡಾ 4.5 ಮತ್ತು ಇತರರಿಗೆ ಒಂದು ಶೇಕಡಾ ಒಳ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಈ ಶಿಫಾರಸನ್ನು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಕಳುಹಿಸಲಾಗಿದೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications