ಪಾನಮತ್ತ ಚಾಲನೆ: 418 ಪ್ರಕರಣ ದಾಖಲು
ಬೆಂಗಳೂರು, ಜೂನ್.2:ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಚಾಲಕರ ವಿರುದ್ಧ ರಾಜಧಾನಿಯ ಸಂಚಾರ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
ಶನಿವಾರ ಮೇ.31ರ ರಾತ್ರಿ ಭಾರೀ ಗಾಳಿ ಮಳೆ ಬಿದ್ದ ಕಾರಣ ಹಲವು ಕಡೆ ಪಾನಮತ್ತ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲು ಸಾಧ್ಯವಾಗದಿದ್ದರೂ, ರಾತ್ರಿ 9 ರಿಂದ 2 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 418 ಚಾಲಕರ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಸಂಚಾರ ಪೊಲೀಸರು ಯಶಸ್ವಿಯಾಗಿದ್ದಾರೆ.[250 ರೂಪಾಯಿ ನೀಡಿ, ಬೆಂಗಳೂರು ನೋಡಿ]

ನಗರದ 62 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 6,033 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಹೆಚ್ಚು 40 ಪ್ರಕರಣ ದಾಖಲಾಗಿದೆ.[ಸುಳ್ಳು ಕೇಸ್ ಬೆದರಿಕೆ: ಟ್ರಾಫಿಕ್ ಇನ್ಸ್ಪೆಕ್ಟರ್ ಸಸ್ಪೆಂಡ್]
4 ಮ್ಯಾಕ್ಸಿ ಕ್ಯಾಬ್, 7ಟೆಂಪೊ, 14 ಲಾರಿ, 13 ಆಟೊ, 92 ಕಾರು ಚಾಲಕರು ಹಾಗೂ 288 ಬೈಕ್ ಸವಾರರು ಪಾನಮತ್ತರಾಗಿ ವಾಹನ ಚಾಲನೆ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇವರಲ್ಲಿ 416 ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆಲ್ಕೋ ಮೀಟರ್ ಮೂಲಕ ತಪಾಸಣೆ ನಡೆಸಿದಾಗ ಇಬ್ಬರು ಚಾಲಕರ ಮದ್ಯ ಸೇವನೆ ಪ್ರಮಾಣ 550 ಮಿ.ಗ್ರಾಂನಷ್ಟಿತ್ತು. ಈ ಎಲ್ಲಾ ಸವಾರರ ವಾಹನ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications