Bengaluru Second Airport: ಬೆಂಗಳೂರು 2ನೇ ಏರ್‌ಪೋರ್ಟ್‌ಗಾಗಿ ಈ ಭಾಗದಲ್ಲಿ 4,500 ಎಕರೆ ಜಾಗ ಫಿಕ್ಸ್
ಬಹುನಿರೀಕ್ಷಿತ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕಾರ್ಯ ಚುರುಕುಗೊಂಡಿದೆ. ಮೊದಲಿಗೆ ಮೂರು ಜಾಗಗಳನ್ನು ಗುರುತಿಸಿದ್ದ ರಾಜ್ಯ ಸರ್ಕಾರವು ಇದೀಗ ಹೊಸ ಏರ್‌ಪೋರ್ಟ್ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ಅಧ್ಯಯನ ಶೀಘ್ರದಲ್ಲೇ ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು ವಿವರವಾದ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಸಲಹೆಗಾರರನ್ನು ನೇಮಿಸಲು ಟೆಂಡರ್ ಕರೆದಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸದ್ಯ ಮೂರು ಸಂಭಾವ್ಯ ಸ್ಥಳಗಳನ್ನು ಗುರುತಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ, ಪರಿಸರ, ಆರ್ಥಿಕ ಮತ್ತು ಕಾರ್ಯತಂತ್ರದ ಕಾರ್ಯಸಾಧ್ಯತೆಯನ್ನು ನಿರ್ಣಯಿಸಲು ಅಧ್ಯಯನಕ್ಕೆ ಮುಂದಾಗಿದೆ. ಸರಕು ಸೇರಿದಂತೆ 35 ವರ್ಷಗಳವರೆಗೆ ಸಂಚಾರ ಬೇಡಿಕೆಯನ್ನು ಇದರಲ್ಲಿ ನಿರೀಕ್ಷಿಸಲಾಗಿದೆ. ಅತ್ತ ಕರ್ನಾಟಕದ ಗಡಿಯ ಬಳಿ ಇರುವ ಹೊಸೂರಿನಲ್ಲಿ ತಮಿಳುನಾಡು ಮತ್ತೊಂದು ವಿಮಾನ ನಿಲ್ದಾಣವನ್ನು ವೇಗವಾಗಿ ನಿರ್ಮಿಸಲು ಮುಂದಾಗಿರುವುದರಿಂದ ಇತ್ತ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಕೂಡ ಚುರುಕುಗೊಂಡಿದೆ.

ಯಾವ ಜಾಗ ಅಂತಿಮ?
ಕನಕಪುರ ರಸ್ತೆಯಲ್ಲಿ ಚೂಡಹಳ್ಳಿ ಮತ್ತು ಸೋಮನಹಳ್ಳಿ, ತುಮಕೂರು ಕಡೆಗೆ ಇರುವ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ ಜಾಗಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಹೊಸ ವಿಮಾನ ನಿಲ್ದಾಣಕ್ಕಾಗಿ ಪ್ರತಿ ಸ್ಥಳದಲ್ಲಿ ಸುಮಾರು 4,500 ಎಕರೆಗಳನ್ನು ಗುರುತಿಸಲಾಗಿದೆ. ಇನ್ನು ಎರಡನೇ ಏರ್‌ಪೋರ್ಟ್ ವಿಚಾರವು ರಾಜಕೀಯವಾಗಿಯೂ ಗಮನ ಸೆಳೆಯುತ್ತಿದೆ. ಕನಕಪುರ ರಸ್ತೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಸಕ್ತಿ ತೋರಿದ್ದಾರೆ. ಇನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ತುಮಕೂರು ರಸ್ತೆಯಲ್ಲಿ ವಿಮಾನ ನಿಲ್ದಾಣ ಬರಬೇಕು ಎಂದು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅತ್ಯಂತ ಸೂಕ್ತವಾದ ಸ್ಥಳವನ್ನು ಗುರುತಿಸಲು ಹಾಗೂ ವಿವರವಾದ ಕಾರ್ಯತಂತ್ರ ಮತ್ತು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಸಲಹೆಗಾರರನ್ನು ನೇಮಿಸಿಕೊಳ್ಳಲು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಈಗ ಟೆಂಡರ್ ಕರೆಯುವ ಮೂಲಕ ಮುಂದಡಿ ಇಟ್ಟಿದೆ. ಎರಡನೇ ವಿಮಾನ ನಿಲ್ದಾಣದ ಸ್ಥಳವನ್ನು ಗುರುತಿಸುವಲ್ಲಿ ಈ ಕಾರ್ಯಸಾಧ್ಯತಾ ವರದಿಯು ಪ್ರಮುಖ ಪಾತ್ರ ವಹಿಸಲಿದೆ.
ಟೆಂಡರ್ ದಾಖಲೆಯ ಪ್ರಕಾರ ಕನಕಪುರ ರಸ್ತೆಯಲ್ಲಿನ ಎರಡು ಜಾಗಗಳು ಪಕ್ಕಪಕ್ಕದಲ್ಲಿದ್ದು, ಅತಿಕ್ರಮಿಸುವ ಭೂ ಪ್ರದೇಶಗಳನ್ನು ಹೊಂದಿವೆ. ಇವುಗಳನ್ನು ಸಂಯೋಜಿತ ನಿವೇಶನವಾಗಿ ಅವುಗಳ ಸಾಮರ್ಥ್ಯವನ್ನು ನಿರ್ಣಯಿಸಲು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಮೌಲ್ಯಮಾಪನ ಮಾಡಬೇಕಾಗಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಕೂಡ ಪರಸ್ಪರ ಒಪ್ಪಿದ ಸಮಯಾವಧಿ ಮತ್ತು ವೆಚ್ಚಗಳಿಗೆ ಒಳಪಟ್ಟು, ನಿಯೋಜನೆಯ ಸಮಯದಲ್ಲಿ ಮೌಲ್ಯಮಾಪನಕ್ಕಾಗಿ ಮತ್ತೊಂದು ಜಾಗ ಸೇರಿಸುವ ಆಯ್ಕೆಯನ್ನು ಮುಕ್ತವಾಗಿಟ್ಟಿದೆ. ಅಲ್ಲದೆ ಪ್ರಾಥಮಿಕ ತಾಂತ್ರಿಕ ಮೌಲ್ಯಮಾಪನಗಳು ಮೂರೂ ತಾಣಗಳು ಕಾರ್ಯಸಾಧ್ಯವೆಂದು ಹೇಳಿದ್ದರೂ ಆದ್ಯತೆಯ ಸ್ಥಳವನ್ನು ಗುರುತಿಸಲು ವಿವರವಾದ ಕಾರ್ಯತಂತ್ರ ಮತ್ತು ತಾಂತ್ರಿಕ ಮೌಲ್ಯಮಾಪನದ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications