ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಈವರೆಗೆ 460 ದೂರುಗಳು, ಎಲ್ಲಿ ಹೆಚ್ಚು ತಿಳಿಯಿರಿ
ಬೆಂಗಳೂರು, ಏಪ್ರಿಲ್. 13: ಮೇ ಹತ್ತರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ, ಕೂಡ ಸಿವಿಜಿಲ್ ಆ್ಯಪ್‌ನಲ್ಲಿ ಏಪ್ರಿಲ್ 11ರವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 460 ದೂರುಗಳು ದಾಖಲಾಗಿವೆ.
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಮಂಗಳವಾರದವರೆಗೆ 1,018 ಎಫ್‌ಐಆರ್‌ಗಳು ದಾಖಲಾಗಿದ್ದು, ಮಾದಕ ದ್ರವ್ಯ, ಮದ್ಯ, ಅಮೂಲ್ಯ ಲೋಹಗಳು ಮತ್ತು ಇತರ ಉಡುಗೊರೆಗಳು ಸೇರಿದಂತೆ 51 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 24 ಗಂಟೆಗಳ ಸಹಾಯವಾಣಿ ಸೇವೆಯನ್ನು ತೆರೆಯಲಾಗಿದೆ.

ದಾಖಲಾಗಿರುವ ಈ 460 ದೂರುಗಳಲ್ಲಿ 389 ಅಸಲಿ ಎಂದು ಚುನಾವಣಾಧಿಕಾರಿಗಳು ಗುರುತಿಸಿದ್ದಾರೆ. ಬೆಂಗಳೂರು ಡಿಇಒ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿಡುಗಡೆ ಮಾಡಿದ ದೈನಂದಿನ ಬುಲೆಟಿನ್ ಪ್ರಕಾರ ಕೇಂದ್ರ ಬೆಂಗಳೂರಿನಿಂದ (309) ಅತಿ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಆರ್‌ಡಬ್ಲ್ಯೂಎ ಸದಸ್ಯೆ ಪೂರ್ಣಿಮಾ ಶೆಟ್ಟಿ, ಸಿ-ವಿಜಿಲ್ ಆ್ಯಪ್ ಬಗ್ಗೆ ಅನೇಕ ನಾಗರಿಕರು ಕುತೂಹಲ ಹೊಂದಿದ್ದಾರೆ. ದೂರುದಾರರ ಗುರುತುಗಳು ಅನಾಮಧೇಯವಾಗಿ ಉಳಿಯುವುದರಿಂದ, ಅವರು ತಮ್ಮ ದೂರುಗಳನ್ನು ಯಾವುದೇ ಆತಂಕವಿಲ್ಲದೆ ದಾಖಲಿಸುತ್ತಿದ್ದಾರೆ. ಆದರೂ, ಜನರಲ್ಲಿ ಈ ಅಪ್ಲಿಕೇಶನ್ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ದೂರು ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಈ ಸಿವಿಜಿಲ್ ಆ್ಯಪ್‌ನೊಂದಿಗೆ ಇಡೀ ರಾಜ್ಯವನ್ನು ಜಿಯೋ ಫೆನ್ಸ್ ಮಾಡಲಾಗಿದೆ ಎಂದು ಜಿಲ್ಲಾ ದೂರು ನಿಗಾ ಘಟಕದ ನೋಡಲ್ ಅಧಿಕಾರಿ ಪ್ರತೀಕ್ ಬಯಾಲ್ ವಿವರಿಸಿದ್ದಾರೆ. ಯಾವುದೇ ವ್ಯಕ್ತಿಯು ಫೋಟೋಗಳು, ವಿಡಿಯೋಗಳು ಮತ್ತು ಆಡಿಯೊ ಕ್ಲಿಪ್‌ಗಳನ್ನು ಅಪ್‌ಲೋಡ್ ಮಾಡುವ ಮೂಲಕ ತಮ್ಮ ದೂರುಗಳನ್ನು ನೋಂದಾಯಿಸಬಹುದು. ಇದರ ವಿಶೇಷತೆಯೆಂದರೇ ದೂರುದಾರರ ಗುರುತುಗಳನ್ನು ಬಹಿರಂಗಪಡಿಸಲಾಗುವುದಿಲ್ಲ.
ದೂರು ದಾಖಲಾದ 100 ನಿಮಿಷಗಳಲ್ಲಿ ಕ್ರಮ ಕೈಗೊಂಡು ದೂರನ್ನು ಮುಕ್ತಾಯಗೊಳಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಕರಪತ್ರಗಳು, ಹಣ, ಪೋಸ್ಟರ್‌ಗಳು ಅಥವಾ ಇತರ ವಸ್ತುಗಳನ್ನು ವಿತರಿಸುವ ದೂರುಗಳನ್ನು ಪೋರ್ಟಲ್‌ನಲ್ಲಿ ನೋಂದಾಯಿಸಬಹುದು. ನಾಗರಿಕರು ಹೆಚ್ಚು ಜಾಗೃತರಾಗಿ ಪೋರ್ಟಲ್‌ನಲ್ಲಿ ದೂರುಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಚುನಾವಣಾಧಿಕಾರಿಗಳು 17.36 ಕೋಟಿ ರೂಪಾಯಿ ದಾಖಲೆ ಇಲ್ಲದ ನಗದು ಹಾಗೂ ಉಡುಗೊರೆ ನೀಡಲು ಸಾಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 29 ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಚುನಾವಣಾ ಆಯೋಗದ ಅಧಿಕಾರಿಗಳಿಂದ ಒಟ್ಟು 126.14 ಕೋಟಿ ರೂಪಾಯಿ ನಗದು ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ರಾಜ್ಯದೆಲ್ಲೆಡೆ ಚುನಾವಣಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರೂ ಕೂಡ ಚುನಾವಣಾ ಅಕ್ರಮಗಳು ನಡೆಯುವುದು ತಪ್ಪಿಲ್ಲ. ಬೆಂಗಳೂರು ನಗರವೊಂದರಲ್ಲೇ ಸುಮಾರು 100 ಚೆಕ್‌ಪೋಸ್ಟ್ ನಿರ್ಮಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 126.14 ಕೋಟಿ ರೂ.ನಗದು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುದರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ಇದೆ. ಬೆಂಗಳೂರಿನಲ್ಲಿ ಮಾರ್ಚ್ 29 ರಿಂದ ಈವರೆಗೆ ಬೆಂಗಳೂರಿನಲ್ಲಿ 53.83 ಕೋಟಿ ರೂ. ಹಣ, ಮದ್ಯ, ಉಚಿತವಾಗಿ ನೀಡಲು ಸಾಗಿಸುತ್ತಿದ್ದ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications